ವಚನ ರಸಪ್ರಶ್ನೆ, ವಚನ ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Prize distribution to the winners of the Vachana Quiz and Vachana Singing Competition
ತಾಳಿಕೋಟೆ 08 : ಪಟ್ಟಣದ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಪಟ್ಟಣದ ಎಸ್.ಕೆ. ಬಾಲಕಿಯರ ಪ್ರೌಢಶಾಲೆ ಮತ್ತು ವಿವಿಎಸ್. ಮಹಿಳಾ ಪಿಯು ಕಾಲೇಜಿನಲ್ಲಿ ವಚನ ರಸಪ್ರಶ್ನೆ, ವಚನ ಗಾಯನ ಸ್ಪರ್ಧೆಯನ್ನು ಶನಿವಾರ ಆಯೋಜಿಸಿತ್ತು.
ಅಧ್ಯಕ್ಷತೆಯನ್ನು ಮಹಿಳಾ ಪಿಯು ಕಾಲೇಜಿನಲ್ಲಿ ಪ್ರಾಚಾರ್ಯೆ ಜ್ಯೋತಿ ಹಿರೇಮಠ ವಹಿಸಿ ಮಾತನಾಡಿ, ವಚನಗಳು ಬದುಕಿನ ಬೆಳಕಿನ ದೀಪಗಳಾಗಿದ್ದು ಅವುಗಳನ್ನು ಅಳವಡಿಸಿಕೊಂಡರೆ ಸುಂದರ ಬದುಕು ಕಟ್ಟಿಕೊಳ್ಳಬಹುದು ಎಂದರು. ಮುಖ್ಯ ಅತಿಥಿಗಳಾಗಿದ್ದ ಎಸ್.ಕೆ.ಕಾಲೇಜಿನ ನಿವೃತ್ತ ಪ್ರಾಚಾರ್ಯ ಗುರುಪಾದ ಘಿವಾರಿ ಅವರು, ವಚನಗಳಲ್ಲಿ ಜೀವನದ ಮೌಲ್ಯಗಳಿದ್ದು ಅರಿತು ನಡೆದವರಿಗೆ ಸನ್ಮಾರ್ಗದಲ್ಲಿ ನಡೆಸುತ್ತವೆ ಎಂದರು.ಕದಳಿವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಉಮಾ ಘಿವಾರಿ ಮಾತನಾಡಿ, ಬಸವಾದಿ ಪ್ರಮಥರ ವಚನಗಳ ಬಗ್ಗೆ ಅವುಗಳ ಮಹತ್ವವನ್ನು ಯುವಪಿಳಿಗೆಗೆ ತಿಳಿಸಿ ಅವರನ್ನು ಜಾಗೃತಗೊಳಿಸಲು ಈ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.ವೇದಿಕೆಯಲ್ಲಿ ಸಿ.ಲಿಂಗಪ್ಪ, ಅನಿಲಕುಮಾರ ಇರಾಜ ಕದಳಿ ವೇದಿಕೆಯ ಸದಸ್ಯರಾದ ಅಕ್ಕಮಹಾದೇವಿ ಪಾಟೀಲ, ಸುಜಾತಾ ಪಾಟೀಲ, ಸುರೇಖಾ ಸಾಲಂಕಿ, ಸಂಗೀತಾ ಬಳಗಾನೂರ ಇದ್ದರು. ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 