ವಚನ ಗಾಯನ ಸ್ಪರ್ಧೆಯಲ್ಲಿ ವಿಜತೇರಾದ ಮಕ್ಕಳಿಗೆ ಬಹುಮಾನ ವಿತರಣೆ
Prize distribution to the winners of the Vachana singing competition
ಲೋಕದರ್ಶನ ವರದಿ
ಕಂಪ್ಲಿ02: ಮಕ್ಕಳಿಗೆ ಬಾಲ್ಯದಲ್ಲಿಯೇ ವಚನ ಸಾಹಿತ್ಯವನ್ನು ಪರಿಚಯಿಸಿದಲ್ಲಿ ಉತ್ತಮ ಜೀವನವನ್ನು ಸಾಗಿಸಬಲ್ಲರು ಎಂದು ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ವಿಶ್ರಾಂತ ಪ್ರಾಚಾರ್ಯ ಎಂ.ಎಸ್.ಶಶಿಧರ ಶಾಸ್ತ್ರಿಗಳು ತಿಳಿಸಿದರು.ಅವರು ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ಆವರಣದಲ್ಲಿರುವ ಅಕ್ಕಮಹಾದೇವಿ ದೇವಸ್ಥಾನದ ಆವರಣದಲ್ಲಿ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿಯ ಅಂಗವಾಗಿ 10 ವರ್ಷದೊಳಗಿನ ಮಕ್ಕಳಿಗೆ ಏರಿ್ಡಸಿದ್ದ ವಚನ ಗಾಯನ ಸ್ಪರ್ಧೆಯ ನೇತೃತ್ವವನ್ನು ವಹಿಸಿ ಮಾತನಾಡಿದರು. ಅಕ್ಕಮಹಾದೇವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಡಾ.ಶಾರದಾ ಜಗನ್ನಾಥ್ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿವಶರಣ ವಚನಗಳು ಬದುಕನ್ನು ಹಸನಗೊಳಿಸುತ್ತವೆ.
ವಚನಗಳ ಅಂತರ್ಯವನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ವಚನ ಗಾಯನ ಸ್ಪರ್ಧೆಯಲ್ಲಿ 33 ಮಕ್ಕಳು ಭಾಗವಹಿಸಿದ್ದರು. ಜಾಜಿ ಅನುಷ್ಕಾ ಪ್ರಥಮ, ಡಿ.ಜ್ಞಾನಿತಾರೆಡ್ಡಿ ದ್ವಿತೀಯ ರತನ್ ಪವಾಡಶೆಟ್ಟಿ ತೃತೀಯ ಬಹುಮಾನಗಳನ್ನು ಗಳಿಸಿದರು. ಬಳಗದ ಸದಸ್ಯೆಯರಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಪದಾಧಿಕಾರಿಗಳಾದ ಲಕ್ಷ್ಮೀ ಕಾಮಗಂಡಿ, ಬಿ.ಸುಮಂಗಲ, ಬಿ.ಎಂ.ಪುಷ್ಪಾ, ಎಸ್.ಸಿಂಧೂಗೌಡ, ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 