ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪ್ರೊ. ಎಚ್.ಟಿ. ಪೋತೆ
Prof. H.T. Pote elected as President of Gulbarga University Postgraduate Teachers Association
ಗುಲಬರ್ಗಾ 12: ದಿ. 12.03.2025 ರಂದು ಗಣಿತ ಅಧ್ಯಯನ ವಿಭಾಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘದ ಸಾಮಾನ್ಯ ಸಭೆ ಜರುಗಿತು.
ಸಭೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಪ್ರೊ. ಎಚ್.ಟಿ. ಪೋತೆಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅದೇ ರೀತಿ ಜೀವತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಆನಂದ ನಾಯ್ಕ, ಕಾರ್ಯದರ್ಶಿಗಳಾಗಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ. ಹಣಮಂತ ಜಂಗೆಯವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.
ಪ್ರೊ. ಚಂದ್ರಕಾಂತ ಕೆಳಮನಿ, ಡಾ. ದೇವಿದಾಸ ಮಾಲೆ, ಡಾ. ಅಂಬರೀಶ ಅಂಬಲಗಿ, ಪ್ರೊ. ಸುಲೋಚನಾ ಸಿ., ಪ್ರೊ. ಪರಮಜ್ಯೋತಿ ಅವರು ಕಾರ್ಯಕಾರಿ ಮಂಡಳಿ ಸದಸ್ಯರಾಗಿ ನೇಮಕಗೊಂಡರು. ಪ್ರೊ. ಲಕ್ಷ್ಮಣ ರಾಜನಾಳಕರ್ ಮತ್ತು ಪ್ರೊ. ಎನ್.ಬಿ. ನಡುವಿನಮನಿ ಅವರು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 