ಪ್ರೊ. ಕೆ.ಎಸ್. ಕೌಜಲಗಿ ಅವರಿಗೆ ಸನ್ಮಾನ
Prof. K.S. Kaujalagi felicitated
ಲೋಕದರ್ಶನ ವರದಿ
ಹುಬ್ಬಳ್ಳಿ 01: ಹುಬ್ಬಳ್ಳಿ ಶಹರ ತಾಲೂಕು 10ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದವರು, ನಿವೃತ್ ಪ್ರಾಧ್ಯಾಪಕ, ಖ್ಯಾತ ಭಾಷಣಕಾರರು, ಹಿರಿಯರಾದ ಪ್ರೊ ಕೆ.ಎಸ್.ಕೌಜಲಗಿ ಅವರ 78ನೇ ಹುಟ್ಟು ಹಬ್ಬದ ಅಂಗವಾಗಿ ಕಸಾಪ ದತ್ತಿ ಕಾರ್ಯಕ್ರಮದಲ್ಲಿ ಕಳೆದ ಐವತ್ತು ವರ್ಷಗಳಿಂದ ಕನ್ನಡ ವಿಷಯ ವನ್ನು ಬೋಧನೆ ಮಾಡುತ್ತಾ ಬಂದಿರುವ ಅವರು ಸೇವಾ ನಿವೃತ್ತಿಯ ನಂತರವೂ ವಿವಿಧ ಕಾಲೇಜುಗಳಲ್ಲಿ ಇಂದಿಗೂ ಬೋಧನೆ ಮಾಡುವ ಕಾಯಕ ಮುಂದುವರಿಸಿರುವ ಅತ್ಯಂತ ಕ್ರಿಯಾಶೀಲರಾಗಿರುವ, ಹಿರಿಯರು, ಮಾರ್ಗದರ್ಶಕರು. ಹಿತೈಸಿಗಳು, ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪ್ರೊ ಕೆ.ಎಸ್.ಕೌಜಲಗಿ ಅವರಿಗೆ ರುದ್ರಾಕ್ಷಿಮಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಬಸವಲಿಂಗ ಸ್ವಾಮಿಜಿಯವರ ಸಾನಿಧ್ಯದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರೆ್ಣ ಮಾಡಿ ಹುತ್ಪೂರ್ವಕವಾಗಿ ಆತ್ಮೀಯವಾಗಿ ಅಭಿನಂದಿಸಿದರು. ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇವರು ಪ್ರೊ ಕೆ ಎಸ್ ಕೌಜಲಗಿ ಅವರಿಗೆ ಉತ್ತಮ ಆರೋಗ್ಯ ಭಾಗ್ಯ ನೀಡಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಖ್ಯಾತ ಲೇಖಕ ಡಾ ಗುರುರಾಜ್ ಪಾಟೀಲ, ಹಿರಿಯರಾದ ಬಿ ಎ ಪಾಟೀಲ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ವಿದ್ಯಾ ವಂಟಮುರಿ, ಆರ್ ಎಂ ಗೋಗೇರಿ, ಮೃತ್ಯುಂಜಯ ಮಟ್ಟಿ, ಎಸ್ ಕೆ. ಆದಪ್ಪನವರ, ಚಂದ್ರಶೇಖರ್ ಅಳಗುಂಡಗಿ, ಸಿ ಜಿ ಧಾರವಾಡಶೆಟ್ಟರ, ವಿರೂಪಾಕ್ಷ ಕಟ್ಟಿಮನಿ, ಸಿದ್ದಮ್ಮ ಅಡವೆಣ್ಣವರ, ಸುನಂದಾ ಬೆನ್ನೂರ, ಸಂಧ್ಯಾ ದೀಕ್ಷಿತ, ಕೃಷ್ಣಮೂರ್ತಿ ಕುಲಕರ್ಣಿ, ಪ್ರೊ ಮುಗಳಿ, ಮುಂತಾದವರು ಇದ್ದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 