ಸಂಖ್ಯಾ ಶಾಸ್ತ್ರಕ್ಕೆ ಪ್ರೊ.ಪಿ.ಸಿ.ಮಹಾಲನೋಬಿಸ್ ಕೊಡುಗೆ ಅಪಾರ
Prof. PC Mahalanobis contribution to Numerology is immense
ಹಾವೇರಿ 10 : ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ ಮಹಾಲನೋಬಿಸ್ ಅವರು ಸಂಖ್ಯಾಶಾಸ್ತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ ಮಹಾಲನೋಬಿಸ್ ಅವರ ಜನ್ಮ ದಿನಾಚರಣೆ ಅಂಗವಾಗಿ 19ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಿಖರವಾದ ಅಂಕಿಅಂಶಗಳು ಸರ್ಕಾರದ ಎಲ್ಲ ಇಲಾಖೆಗಳಿಗೆ ಅತ್ಯವಶ್ಯಕವಾಗಿವೆ. ಸಾಂಖ್ಯಿಕ ಇಲಾಖೆಯು ಸಾಕಷ್ಟು ಮಹತ್ತರ ಅಂಕಿಅಂಶಗಳನ್ನು ಒದಗಿಸುತ್ತದೆ ಎಂದರು.
ಉಪನ್ಯಾಸಕರಾಗಿ ಭಾಗವಹಿಸಿದ ಹುಬ್ಬಳ್ಳಿ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ ಅಧಿಕಾರಿ ಪ್ರಮೋದ ಪಂಡಿತ ಮಾತನಾಡಿ, 1950ರಲ್ಲಿ ಪ್ರಾರಂಭವಾದ ರಾಷ್ಟ್ರೀಯ ಸಮೀಕ್ಷೆ 75 ವರ್ಷ ಪೂರೈಸಿದೆ. ಈ 75 ವರ್ಷಗಳಲ್ಲಿ ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಈ ಸಮೀಕ್ಷೆಯಲ್ಲಿನ ಅಂಕಿ-ಅಂಶಗಳ ಆಧಾರದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್.ಎಮ್ ಭುಜಂಗ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಾಯಕ ನಿರ್ದೇಶಕರಾದ ಶ್ರೀ ಜೆ.ಆರ್.ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಹೆಚ್.ವಾಯ್ ಮೀಶಿ ಅವರು ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ ಮಹಾಲನೋಬಿಸ್ ಅವರ ಸಾಧನೆ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಜಿಲ್ಲಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಶಂಕರ ಪವಾರ ಕಾರ್ಯಕ್ರಮ ನಿರೂಪಿಸಿದರು ಹಾಗೂ ಕು. ಸಕ್ಕುಬಾಯಿ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 