ಹಾವೇರಿ: ಜೂನ್ 30: ಪ್ರೊ.ಪಿ.ಸಿ.ಮಹಾಲನೋಬಿಸ್ ಅವರು ಸಾಂಖ್ಯಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನದ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಭಾರತದ ಖ್ಯಾತ ವಿಜ್ಞಾನಿ ಹಾಗೂ ಸಾಂಖ್ಯಿಕ ತಜ್ಞರಾದ ಪ್ರೊ.ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನ ಅಂಗವಾಗಿ 14ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಎಲ್ಲ ಇಲಾಖೆಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಕರ್ಾರಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಆರ್.ಎಲ್.ತೆಂಬದ ಅವರು ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಶ್ರೀಮತಿ ರಮೇಶ ದೇಸಾಯಿ, ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲ ಎನ್., ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಕೆ.ಎನ್.ಮಣ್ಣವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಪಿ.ವೈ.ಶೆಟ್ಟೆಪ್ಪನವರ, ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.