ಪೋಸ್ಕೊ ಪ್ರಕರಣ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ
Program to create awareness among children about the POSCO case
ರಾಯಬಾಗ 07: ಪೋಸ್ಕೊ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಮಕ್ಕಳಲ್ಲಿ ತಮ್ಮ ರಕ್ಷಣೆಗಳ ಬಗ್ಗೆ ಜಾಗೃತಗೊಳಿಸಲು ಎಲ್ಲ ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.ಶನಿವಾರ ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಕಾನೂನು ಸಮಿತಿ, ಶಿಕ್ಷಣ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸುರಕ್ಷತೆ ಬಗ್ಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಬಾಲ್ಯ ವಿವಾಹದಲ್ಲಿ ಭಾಗವಹಿಸುವ ಎಲ್ಲರು ಅಪರಾಧಿಗಳಾಗುತ್ತಾರೆ.
ಅವರು ಶಿಕ್ಷೆಗೆ ಒಳಗಾಗುತ್ತಾರೆ. ವರದಕ್ಷಿಣೆ ನಿಷೇಧ ಕಾಯ್ದೆ ಬಗ್ಗೆ ಪಠ್ಯದಲ್ಲಿ ಅಳವಡಿಸಲು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ ಎಂದು ತಿಳಿಸಿದರು.ಬಿಇಒ ಬಸವರಾಜಪ್ಪ ಆರ್ ಮಾತನಾಡಿ, ಸಮಾಜಕ್ಕೆ ಮಾರಕವಾದ ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕತೆಗಳಿಂದ ರಕ್ಷಣೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕಾನೂನುಗಳು ಜಾರಿಗೊಳಿಸಿದೆ. ಮಕ್ಕಳು ತಮಗೆ ಆಗುವ ಕಿರುಕುಳ ಕುರಿತು ಪಾಲಕರಿಗೆ, ಶಿಕ್ಷಕರಿಗೆ ತಿಳಿಸಬೇೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ, ಮಕ್ಕಳು ತಮ್ಮ ತೊಂದರೆ ಬಗ್ಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದರು.ರಾಜಶ್ರೀ ಬಡೊದೆ, ವಕೀಲ ಕೆ.ಎಮ್.ಮದಾಳೆ ಮಾತನಾಡಿದರು. ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಸಂಜಿವ ಒಡೆಯರ, ವಿಠ್ಠಲ ಕೊಟ್ರೆ, ಮುಖ್ಯೋಧ್ಯಾಪಕ ಸಂತೋಷ ಬಸನಾಯಿಕ, ಎಸ್.ಎ.ಕಾಂಬಳೆ, ಎಸ್.ಜಿ ಖೊತ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ಗೋಪಾಲ ಹುಚ್ಚೆನ್ನವರ ಸ್ವಾಗತಿಸಿ, ನಿರೂಪಿಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 