ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರೀಶೀಲನೆ
ವಿಜಯಪುರ, ನವೆಂಬರ್ 08,: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ “ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿಡ್ಲಬೂಎಸ್‌ಎಂ) ಸಮಿತಿಯ ಸಭೆ ಹಾಗೂ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಒಟ್ಟು 1016 ಜನವಸತಿ-ಗ್ರಾಮಗಳಿಗೆ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಸದರಿ ಯೋಜನೆಯಡಿ 577 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಹಾಗೂ 439 ಕಾಮಗಾರಿಗಳು ಪ್ರಗತಿ ಹಂತದಲ್ಲಿರುತ್ತವೆ. ಸದರಿ ಯೋಜನೆಯಡಿ ಒಟ್ಟು 4.64 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳಗಳನ್ನು ಅಳವಡಿಸುವ ಗುರಿ ಹೊಂದಿದ್ದು, ಅವುಗಳಲ್ಲಿ ಈಗಾಗಲೇ 3.24 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ಒದಗಿಸಲಾಗಿದೆ. ಬಾಕಿ ಉಳಿದ 1.40 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಹಾಗೂ 15 ಸಾವಿರ ಮನೆಗಳಿಗೆ ನವ್ಹಂಬರ 2024 ಮಾಹೆಯಲ್ಲಿ ನಲ್ಲಿ ಸಂಪರ್ಕ ನೀಡಲು ಗುರಿಯನ್ನು ನಿಗದಿಪಡಿಸಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಗುಣಮಟ್ಟವನ್ನು ಜಂಟಿಯಾಗಿ ಪರೀಕ್ಷೆ ನಡೆಸಬೇಕು. ಎಲ್ಲ ಜಲಮೂಲ ಹಾಗೂ ಜಲ ಸಂಗ್ರಹಾಲಯಗಳನ್ನು ಮುಂಗಾರಿನ ನಂತರ ಪರೀಕ್ಷೆಗೆ ಆದ್ಯತೆ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಮಾದರಿ ಪರೀಕ್ಷೆ (ಖಚಿಟಠಿಟಜ ಣಣಟಿರ) ಗಳನ್ನು ನಡೆಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ 34 ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಸದರಿ ಅಂಗನವಾಡಿಗಳಿಗೆ ಜಲ ಜೀವನ ಮಿಷನ್ ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಎಸ್. ಎಮ್. ಗುಣಾರಿ, ಸಾಮಾಜಿಕ ಅರಣ್ಯ ಇಲಾಖೆಯ ವಿಭಾಗಿಯ ಅರಣ್ಯ ಅಧಿಕಾರಿಗಳಾದ ವಿನೂತಾ ಆರ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಸಣ್ಣ ನೀರಾವರಿ ಹಾಗೂ ಅಂತರಜಲ ಅಭಿವೃಧ್ಧಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್. ಎಸ್. ಕೊಳ್ಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಿ. ಎಸ್. ಕುಂಬಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.