ಪಂಚ ಗ್ಯಾರಂಟಿ ಯೋಜನೆಯಗಳ ಪ್ರಗತಿ ಸಭೆ

Progress meeting of Panch Guarantee Schemes

ಇಂಡಿ 10: ತಾಲೂಕು ಪಂಚಾಯತ್ ವ್ಯಾಪ್ತಿಯ ಸಾಲೋಟಗಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ತಾಲೂಕು ಮಟ್ಟದ 05 ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆಯನ್ನು ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಶ್ರೀ ಪ್ರಶಾಂತ ಕಾಳೆ ಇವರ ಅದ್ಯಕ್ಷತೆಯಲ್ಲಿ ಮತ್ತು ಗ್ಯಾರಂಟಿ ಯೋಜನೆ ಸದಸ್ಯರು ಹಾಗೂ ಕಾರ್ಯದರ್ಶಿಗಳ ಹಾಗೂ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ರಾಠೋಡ್ ಅವರ ನೇತೃತ್ವದಲ್ಲಿ ಜರುಗಿತು.   

5 ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ ಯೋಜನೆ,ಶಕ್ತಿ ಯೋಜನೆ, ಯುವ ನಿಧಿ ಯೋಜನೆ ಅನ್ನ ಭಾಗ್ಯ ಯೋಜನೆ,ಗೃಹ ಜ್ಯೋತಿ ಯೋಜನೆಗಳ ಬಗ್ಗೆ  ಪ್ರಗತಿ ಪರೀಶೀಲನೆ ಜರುಗಿತು. ಪ್ರಶಾಂತ ಕಾಳೆ ಅವರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ತಲುಪುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಉಪಸ್ಥಿತರಿದ್ದ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ರಾಠೋಡ ಅವರು ಮಾತನಾಡಿ  ಸರ್ಕಾರ  ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೆ ತಲುಪುವಂತಾಗಬೇಕು ಹಾಗೂ ಈ ಎಲ್ಲಾ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಆಗಬೇಕು ಎಂದು ತಿಳಿಸಿದರು.  

ಈ ಸಂದರ್ಭದಲ್ಲಿ ಎಲ್ಲ ಗ್ಯಾರಂಟಿ ಯೋಜನೆ ನಿರ್ವಹಣಾ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ  ಪಂಚಾಯತ್ ಸದಸ್ಯರುಗಳು ಮತ್ತು  ಸಿಬ್ಬಂದಿಗಳು ಹಾಜರಿದ್ದರು.