ಪ್ರಗತಿ ಪರೀಶೀಲನೆ: ಕಂದಾಯ ಅಧಿಕಾರಿಗಳ ಸಭೆಬೇಸಿಗೆ ಕಾಲ ಸಮರ್ಕ ನಿರ್ವಹಣೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಮಾ.19: ಜಿಲ್ಲೆಯಲ್ಲಿ ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಕಾರಣ ಬೇಸಿಗೆಗಾಲದಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸಮರ್ಕವಾಗಿ ಪೂರೈಕೆಗೆ ಕ್ರಮ ವಹಿಸಬೇಕು. ಘನತ್ಯಾಜ್ಯ ವಿಲೇವಾರಿಗೆ ಆಯಾ ತಾಲೂಕು ವ್ಯಾಪ್ತಿಯ ಪಟ್ಟಣ ಪಂಚಾಯತಿಗಳು ಸ್ಥಳ ಗುರುತಿಸಿ ನಿಗದಿಪಡಿಸಬೇಕು ಎಂದು ತಿಳಿಸಿದರು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಬುಧವಾರ (ಮಾ.19) ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವು ನೀರು ಕೊರತೆ ಇರುವ ಗ್ರಾಮಗಳಲ್ಲಿ, ಪಟ್ಟಣ ಪಂಚಾಯತಿಗಳಲ್ಲಿ ನೀರು ಪೂರೈಕೆಗೆ ಪಂಚಾಯತಿಗಳ ಅನುದಾನ ಬಳಕೆ ಮಾಡಿಕೊಳ್ಳಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ತಿಳಿಸಿದರು.ಈಗಾಗಲೇ 2 ಟಿಎಂಸಿ ನೀರನ್ನು ಮಹಾರಾಷ್ಟ್ರದಿಂದ ಬಿಡುಗಡೆ ಮಾಡಲು ಕೋರಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾದ್ಯತೆ ಇರುವುದಿಂದ ಮುಂಚಿತವಾಗಿಯೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಬೇಕು.ಟೆಂಡರ್ ಪ್ರಕ್ರಿಯೆ ಹಂತದಲ್ಲಿ ಪೂರೈಕೆಯ ನೀರು ಪರೀಕ್ಷಿಸಿ ಶುದ್ಧ ಕುಡಿಯುವ ಎಂದು ಖಾತರಿ ಬಳಿಕ ನಂತರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಖಾಸಗಿ ಬೋರ್ವೆಲ್ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅನುದಾನ ಬಳಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಭೂ-ಕಂದಾಯ ಬಾಕಿ ವಸೂಲಾತಿಗೆ ಕ್ರಮ ವಹಿಸಬೇಕು. ಆಯಾ ತಾಲೂಕು ತಹಶೀಲ್ದಾರ್ ಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ ಮಾತನಾಡಿ ಕಳೆದ ವರ್ಷ ನಗರ ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ ಬೋರ್ವೆಲ್ ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ. ಬರುವ ಬೇಸಿಗೆಗಾಲದಲ್ಲಿ ನೀರು ಪೂರೈಕೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟಿಂಗ್ ಪ್ರಾರಂಭಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಚಿಕ್ಕೋಡಿ ಇಂದಿರಾ ಕ್ಯಾಂಟಿನ್ ಪ್ರಾರಂಭಕ್ಕೆ ಸ್ಥಳದ ಸಮಸ್ಯೆಯಿತ್ತು ಈಗ ಸ್ಥಳ ನಿಗದಿಪಡಿಸಲಾಗಿದೆ ಎಂದು ಕಲಾದಗಿ ಹೇಳಿದರು.ಜಿಲ್ಲಾಧಿಕಾರಿ ಮೊಹಮ್ಮಾ ರೋಷನ್ ಮಾತನಾಡಿ ಕಸ ವಿಲೇವಾರಿಗೆ ಈಗಾಗಲೇ ಸ್ಥಳ ಗುರುತಿಸಿ ಹಸ್ತಾಂತರಿಸಲು ಸಂಬಂಧಿಸಿದ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ, ಘನತ್ಯಾಜ್ಯ ವಿಲೇವಾರಿಗೆ ಮುಖ್ಯಾಧಿಕಾರಿಗಳು ಸ್ಥಳ ಬಳಕೆ ಮಾಡಿಕೊಳ್ಳಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ-ಖಾತಾ ನೋಂದಣಿಗೆ ಹೆಸ್ಕಾಂ ಇಲಾಖೆಯಿಂದ ಆರ್.ಆರ್ ನಂಬರ್ ಮೂಲಕ ಮತ್ತು ಕಂದಾಯ ಇಲಾಖೆಯಿಂದ ಮಾಲೀಕರ ಮಾಹಿತಿ ಪಡೆದು ಎ ಮತ್ತು ಬಿ ಖಾತಾ ನೋಂದಣಿಗೆ ಸಮೀಕ್ಷೆ ಕೈಗೊಳ್ಳಬೇಕು. ಒಂದುವೇಳೆ ಅನಧಿಕೃತ ಆಸ್ತಿಗಳು ಕಂಡು ಬಂದರೆ ಅಂತಹ ಆಸ್ತಿಗಳ ಮಾಹಿತಿ ಕೂಡ ನೀಡಬೇಕು ಎಂದು ತಿಳಿಸಿದರು.ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹೆಸ್ಕಾಂ ಮೂಲಕ ಮಾಲೀಕರ ಮಾಹಿತಿ ಪಡೆದು ಎ ಮತ್ತು ಬಿ ಖಾತಾ ನೋಂದಣಿಗೆ ಕ್ರಮ ವಹಿಸಬೇಕು. ಕೃಷೇತರ ಖಾಸಗೆ ಬಡಾವಣೆಗಳ ಮಾಹಿತಿ ಪಡೆದು ಬಿ-ಖಾತಾ ನೋಂದಣಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಕಂದಾಯ ಮತ್ತು ಖಾಸಗಿ ಆಸ್ತಿಗಳ ಪ್ಯಾಪಿಂಗ್ ಮಾಡಿ ಭೂಮಿ ವೆಬ್ ಸೈಟ್ ನಲ್ಲಿ ಮತ್ತು ಇ-ಆಸ್ತಿ ಪೋಟಲ್ ನಲ್ಲಿ ಮ್ಯಾಪ್ ಅಪ್ಲೋಡ್ ಮಾಡಬೇಕು. ಭೂಮಿಯ ಗಡಿ ಆಕರ್ ಬಂದ್ ಸಮಸ್ಯೆಗಳಿದ್ದಲ್ಲಿ ಕೂಡಲೇ ಅಂಥವುಗಳನ್ನು ಪರಿಹರಿಸಿ ಮ್ಯಾಪ್ ಅಪ್ಲೋಡ್ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ್ ನಾಯಕ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಎಲ್ಲ ತಾಲೂಕಾ ತಹಶೀಲ್ದಾರಗಳು, ಸೇರಿದಂತೆ ಕಂದಾಯ ಇಲಾಖೆ ವಿವಿಧ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.