ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ : ಪಡಿತರ ಅಕ್ಕಿಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ: ರೆಡ್ಡಿ ಶ್ರೀನಿವಾಸ
Progress review meeting of Pancha Guarantee Schemes: Put a stop to illegal sale of ration rice: Redd
ಲೋಕದರ್ಶನ ವರದಿ
ಕೊಪ್ಪಳ 30: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆಗೆ ಯಾವುದೇ ರೀತಿಯ ಅವಕಾಶ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಧಾನ್ಯಗಳನ್ನು ಮಾರಾಟಕ್ಕೆ ಅವಕಾಶವಿರುವುದಿಲ್ಲ. ಆದ್ಯಾಗೂ ಸಹ ಪಡಿತರ ಅಕ್ಕಿಯನ್ನು ಅಕ್ರಮ ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ತ್ವರಿತವಾಗಿ ಕ್ರಮ ಕೈಗೊಳ್ಳುವುದರ ಜೊತೆಗೆ ಅವರ ಮೇಲೆ ಚಾರ್ಜ್ ಶೀಟ್ ಹಾಕುವ ವ್ಯವಸ್ಥೆಯಾಗಬೇಕು. ಅಕ್ರಮ ಪಡಿತರ ಚೀಟಿ ಮಾರಾಟಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿದ್ದು, ಇದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು.
ಪಡಿತರ ವಿತರಣೆಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಬೇಕು. ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ರಮ ಕೈಗೊಳ್ಳಿ. ಆಹಾರ ಸಾಮಾಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟವನ್ನು ಪರೀಶೀಲಿಸಬೇಕು. ಈ ಬಗ್ಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಎಲ್ಲಾ ಅಧ್ಯಕ್ಷರು, ಸದಸ್ಯರು ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರೀಶೀಲಿಸಬೇಕು ಎಂದರು.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಿಡಿಪಿಓ ಕಛೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇದನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು. ಮರಣ ಹೊಂದಿದ ಫಲಾನುಭಿಗಳಿಗೆ ಸಹಾಯಧನ ಸಂದಾಯವಾಗುತ್ತಿದ್ದಲ್ಲಿ ತಕ್ಷಣ ಅದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು.
ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರೀಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ನೀಡುತ್ತಿರುವ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಬೇಕು. ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ ನಮ್ಮ ಜಿಲ್ಲೆಯಲ್ಲಿ ಸುಮಾರು 11 ಕೋಟಿ 22 ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಉಚಿತ ಬಸ್ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 