ವಿಜಯಪುರ ತಾಪಂ ಸಭಾಭವನದಲ್ಲಿ ನಾನಾ ಯೋಜನೆಯ ಪ್ರಗತಿ ಪರೀಶೀಲನೆ ಸಭೆ

      ವಿಜಯಪುರ ತಾಪಂ ಸಭಾಭವನದಲ್ಲಿ ನಾನಾ ಯೋಜನೆಯ ಪ್ರಗತಿ ಪರೀಶೀಲನೆ ಸಭೆ Progress review meeting of various projects at Vijayapura Municipal Corporation Hall

ಲೋಕದರ್ಶನ ವರದಿ 

      ವಿಜಯಪುರ  02: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿರುವ ತೆರಿಗೆ ಸಂಗ್ರಹಣಾ ಪ್ರಗತಿ ಶೇ.100 ರಷ್ಟು ಸಾಧಿಸಬೇಕು. ಗುರಿ ಸಾಧನೆಯಲ್ಲಿ ಹಿಂದುಳಿದ ಪಂಚಾಯಿತಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು. 

ವಿಜಯಪುರ ತಾಪಂ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಗ್ರಂಥಾಲಯ ಕರ ಹಾಗೂ ಭಿಕ್ಷುಕರ ವಸೂಲಾತಿ ಪ್ರಗತಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದರು. 

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಹಣ ಪಾವತಿ, ಬಾಕಿ ಪ್ರಕರಣಗಳ ಬಗ್ಗೆ ಪರೀಶೀಲನೆ ನಡೆಸಿ, ಬಾಕಿ ಪಾವತಿಗಳನ್ನು ತ್ವರಿತವಾಗಿ ಪಾವತಿ ಮಾಡಿ ಕಾಮಗಾರಿಗಳ ನಿರಂತರತೆ ಕಾಯ್ದುಕೊಳ್ಳಬೇಕು ಎಂದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯ ಪ್ರಗತಿಯು ನೀರೀಕ್ಷಿತವಾಗಿಲ್ಲ. ಆದ್ದರಿಂದ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಶೇ. 100ರಷ್ಟು ಪೂರ್ಣಗೊಳಿಸಬೇಕು. ಅದೇ ರೀತಿ, ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ಎಲ್ಲ ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಪ್ರಮುಖವಾದ ದ್ರವ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಪರೀಶೀಲಿಸಿದ ಅವರು, ಈ ಯೋಜನೆಗಳ ಅನುಷ್ಠಾನದಲ್ಲಿ ವೇಗ ಹೆಚ್ಚಿಸಿ, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದರು. ಗ್ರಾಮ ಮಟ್ಟದಲ್ಲಿ ಜ್ಞಾನ ವಿಸ್ತರಣೆಗೆ ನೆರವಾಗುವ ಗ್ರಂಥಾಲಯಗಳ ಸ್ವಚ್ಛತೆ ಮತ್ತು ನಿರ್ವಹಣೆ ಕುರಿತು ವಿಶೇಷ ಗಮನ ಹರಿಸಿ, ಗ್ರಂಥಾಲಯಗಳನ್ನು ನಿರಂತರವಾಗಿ ಸ್ವಚ್ಛವಾಗಿಡುವುದರ ಜೊತೆಗೆ, ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ಸುಧಾರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. 

ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಗ್ರಾಮಗಳಿಗೂ ಸಮರ​‍್ಕ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ತಾಪಂನ ಸಹಾಯಕ ನಿರ್ದೇಶಕರು(ಗ್ರಾ.ಉ) ಎಸ್‌. ಆರ್‌. ಕಟ್ಟಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ಖಿಒಋ, ಖಿಋಅ, ಂಂ ಹಾಗೂ ಉಪಸ್ಥಿತರಿದ್ದರು.