ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ  Progress review meeting on guarantee schemes

ಲೋಕದರ್ಶನ ವರದಿ    

ಹಳಿಯಾಳ, ಆ.25: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಸಿಕ ಪ್ರಗತಿ ಪರೀಶೀಲನಾ ಸಭೆ ಮಂಗಳವಾರ ಹಳಿಯಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ. ನಾಯ್ಕ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಿಕೆ ಹಾಗೂ ಯೋಜನೆಗಳ ಪರಿಣಾಮಕಾರಿ ಜಾರಿಯ ಕುರಿತು ಸಭೆಯಲ್ಲಿ ಪರೀಶೀಲನೆ ನಡೆಸಲಾಯಿತು.  ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ಎಂ.ಎಸ್‌. ಅಲ್ಲಾಬಕ್ಷ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.