ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ
Progress review meeting on guarantee schemes
ಲೋಕದರ್ಶನ ವರದಿ
ಹಳಿಯಾಳ, ಆ.25: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಸಿಕ ಪ್ರಗತಿ ಪರೀಶೀಲನಾ ಸಭೆ ಮಂಗಳವಾರ ಹಳಿಯಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ. ನಾಯ್ಕ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಿಕೆ ಹಾಗೂ ಯೋಜನೆಗಳ ಪರಿಣಾಮಕಾರಿ ಜಾರಿಯ ಕುರಿತು ಸಭೆಯಲ್ಲಿ ಪರೀಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ಎಂ.ಎಸ್. ಅಲ್ಲಾಬಕ್ಷ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 