ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಇತ್ಯಾದಿಗಳ ಬಳಕೆಗೆ ನಿಷೇಧ

ವಿಜಯಪುರ ಮೇ. 22 : ಕೋವಿಡ್-19 ರೋಗವು ವ್ಯಾಪಕವಾಗಿ ಹರಡುತ್ತಿದ್ದು, ಸಕರ್ಾರದ ಆದೇಶದನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನಮಸಾಲಾ, ಜದರ್ಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಅದು ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನಿಮ್ಯೋನಿಯಾ ಮತ್ತು ಕೋವಿಡ್-19 ಒಬ್ಬರಿಂದೊಬ್ಬರಿಗೆ ಹರಡಲು ಕಾರಣವಾಗುವುದರಿಂದ ಜಿಲ್ಲೆಯಾದ್ಯಂತ ಇವುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಳಸುವುದನ್ನು ನಿಷೇಧಿಸಲಾಗಿದ್ದು, ಆದರೆ ಮಾರಾಟಕ್ಕೆ ನಿಷೇಧವಿರುವುದಿಲ್ಲ ಎಂದು ಸಕರ್ಾರದ ಮುಖ್ಯಕಾರ್ಯದಶರ್ಿ ಹಾಗೂ ಕನರ್ಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಟಿ.ಎಂ ವಿಜಯ ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ಬೀಡಿ, ಸಿಗರೇಟ್ ಸೇದುವುದರಿಂದಲೂ ಕೈಯಿಂದ ಬಾಯಿಗೆ ವೈರಸ್ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆಯಿರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೂ ಈ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.

ಕೋವಿಡ್-19 ಸೋಂಕಿತರು ಜಗಿಯುವ ತಂಬಾಕು ಹಾಗೂ ಪಾನಮಸಾಲಾ, ಜದರ್ಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದೊಬ್ಬರಿಗೆ ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ ಮಸಾಲಾ, ಜದರ್ಾ, ಖೈನಿ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಳಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಇದನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದವರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ -1857 ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.