ಕಾರವಾರ 27: ಡಿಸೆಂಬರ್ 29 ರಂದು ನಡೆಯುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ತಡೆಯಲು ನಿಷೇಧಾಜ್ಞೆಯನ್ನು ವಿಧಿಸಿಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಶಾಂತತಾಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರಗೆ ಸದರಿ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾವಧಿಯಲ್ಲಿ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ವಸ್ತುಗಳು ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ್ ವಾಚ್ , ವಯರ್ ಲೆಸ್ ಬ್ಲೂಟುತ್, ಈಯರ್ ಬ್ಯಾಂಡ್ ಪೋನ್‌ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.