88 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೈತರಿಗೆ ವರದಾನ: ಸಚಿವ ಸತೀಶ ಜಾರಕಿಹೊಳಿ
Project to fill 88 lakes is a boon for farmers: Minister Satish Jarkiholi
ಲೋಕದರ್ಶನ ವರದಿ
ಹಾವೇರಿ 14: ಹಿರೇಕೆರೂರುಹಿರಟ್ಟೀಹಳ್ಳಿ ತಾಲೂಕಿನ 88 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ವರದಾನವಾಗಲಿದ್ದು, ಮಳೆಯ ಕೊರತೆಯ ಸಂದರ್ಭದಲ್ಲಿ ಇಂತಹ ಯೋಜನೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಲೋಕೋಪಯೋಗಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಸರ್ವಜ್ಞ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಇನ್ನಷ್ಟು ಕೆರೆಗಳನ್ನು ನೀರಿನಿಂದ ತುಂಬಿಸುವ ಕೆಲಸ ಕೈಗೊಳ್ಳಬೇಕಿದೆ. ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಕವಾಗಿ ಸಂಗ್ರಹಿಸಿ ಕೆರೆಗಳನ್ನು ತುಂಬಿಸಿದರೆ ರೈತರಿಗೆ ನೀರಾವರಿ, ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಅಗತ್ಯ ನೀರಿನ ಲಭ್ಯತೆ ಖಚಿತವಾಗಲಿದೆ ಎಂದು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 