39 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ದಿ. 24ರಂದು ಚಾಲನೆ
Project to fill water for 39 lakes to be launched on 24th
ರಾಯಬಾಗ 13: ಬಾವನ ಸೌದತ್ತಿ ಗ್ರಾಮದಲ್ಲಿ ಕೃಷ್ಣಾ ನದಿಯಿಂದ ರಾಯಬಾಗ ತಾಲೂಕಿನ 39 ಕೆರೆಗಳಿಗೆ ನೀರು ತುಂಬುವ ಮಹತ್ವಾಕಾಂಕ್ಷಿ ಯೋಜನೆಗೆ ಇದೇ ತಿಂಗಳ ದಿ. 24 ಮತ್ತು 25 ರಂದು ಪ್ರಾಯೋಗಿಕವಾಗಿ ಚಾಲನೆ ನೀಡಲು ಸೂಚಿಸಲಾಯಿತು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು ಹೇಳಿದರು.
ಗ್ರಾಮದ ಕೃಷ್ಣಾ ನದಿ ದಂಡೆಯಲ್ಲಿ ಕೆರೆ ತುಂಬಿಸುವ ಯೋಜನೆಯ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಕೃಷ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚು ಇರುವುದರಿಂದ ರಾಯಬಾಗ ತಾಲೂಕಿನ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಕೆರೆ ತುಂಬುವ ಯೋಜನೆಯ ಕನಸು ನನಸಾಗಲಿದೆ. ಕೆರೆಗಳನ್ನು ತುಂಬುವುದರಿಂದ ಅಂತರ್ಜಲದ ಮಟ್ಟ ಹೆಚ್ಚಾಗಿ, ಕುಡಿಯುವ ನೀರಿನ ಸಮಸ್ಯೆಯೂ ಸಹ ಬಗೆ ಹರಿಯಾಲಿದೆ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಜಿಲ್ಲಾ ಉಸ್ತುವಾರ ಸಚಿವರ ಆಪ್ತ ಸಹಾಯಕ ಶಿವಗೌಡ ಪಾಟೀಲ, ಹಾಜಿ ಮುಲ್ಲಾ, ದೀಲೀಪ ಜಮಾದಾರ, ನೀರಾವರಿ ಅಧಿಕಾರಿ ಶಶಿ ಜೈನಾಪುರೆ, ರಾಜು ಕೋಟಗಿ, ಅಣ್ಣಪ್ಪಾ ಭೋವಿ, ರವೀಂದ್ರ ಮೈಶಾಳೆ,ರಾಜು ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 