ಮರಣಾನಂತರ ದೇಹದಾನದ ವಾಗ್ದಾನ
Promise of body donation after death
ವಿಜಯಪುರ 28: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಮತ್ತು ನಗರದ ನಿವಾಸಿ ಮಲ್ಲಿಕಾರ್ಜುನ ಗುರುಮುರ್ತಿ ಕೆಳಗಡೆ(74) ಅವರು ಮರಣಾನಂತರ ತಮ್ಮ ದೇಹವನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡುವುದಾಗಿ ವಾಗ್ದಾನ ಮಾಡಿದ್ದಾರೆ.
ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದೆ. ಈಗ ಮಲ್ಲಿಕಾರ್ಜುನ ಗುರುಮುರ್ತಿ ಕೆಳಗಡೆ ಅವರು ಮರಣಾನಂತರ ತಮ್ಮ ದೇಹದಾನ ವಾಗ್ದಾನ ಮಾಡಿದ್ದಾರೆ. ಅಲ್ಲದೇ, ಬಿ.ಎಲ್.ಡಿ.ಇ. ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್.ಎಸ್. ಬುಲಗೌಡ ಅವರನ್ನು ಭೇಟಿ ಮಾಡಿ ದೇಹ ದಾನವನ್ನು ಮಾಡಲು ತಮ್ಮ ಹೆಸರು ನೋಂದಾಯಿಸಿ, ದೇಹ ದಾನಮಾಡುವ ಅರ್ಜಿಯನ್ನು ಭರ್ತಿಮಾಡಿ, ಸಹಿಮಾಡಿ ವಿಭಾಗದ ಮುಖ್ಯಸ್ಥರಿಗೆ ಸಲ್ಲಿಸಿದರು.ಅವರ ನಿರ್ಧಾರಕ್ಕೆ ಬಿ.ಎಲ್.ಡಿ.ಇ. ಸಂಸ್ಥೆ ಮತ್ತು ಅಂಗರಚನಾಶಾಸ್ತ್ರವಿಭಾಗದ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 