ಕುಡಿಯುವ ನೀರು, ವಿದ್ಯುತ್ ಸಮಸ್ಯೆಗೆ ತ್ವರಿತ ಸ್ಪಂದನೆ: ಶಿವಣ್ಣವರ ಸೂಚನೆ
Prompt response to drinking water and electricity issues: Shivannavar's directive
ಬ್ಯಾಡಗಿ 29: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಿ, ಸಮಸ್ಯೆ ಇರುವ ಗ್ರಾಮಗಳಿಗೆ ಭೇಟಿ ನೀಡಿ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಜನರ ಹಕ್ಕಾಗಿದ್ದು, ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದರು.
ರೈತರಿಗೆ ಸಮರ್ಕ ವಿದ್ಯುತ್ ಪೂರೈಕೆ, ಮಳೆ ಕೊರತೆಯಿಂದ ಬೆಳೆ ಹಾನಿಯಾಗದಂತೆ ಕೃಷಿ ಇಲಾಖೆ ನಿಗಾ ವಹಿಸುವುದು, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಹಾಗೂ ಪಶುಸಂಗೋಪನೆ ಇಲಾಖೆಯು ಜಾನುವಾರುಗಳ ಆರೈಕೆಗೆ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ ಅವರು, ಪಟ್ಟಣದ ರಸ್ತೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 