ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ: ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
Prophet Muhammad's Birthday: Fruits distributed to patients
ಲೋಕದರ್ಶನ ವರದಿ
ಜಮಖಂಡಿ 27 : ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಎಐಎಂಐಎಂ ಪಕ್ಷದ ಸಂಘಟನೆಯ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜಯಂತ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು, ಬಿಸ್ಕತ್ ಹಾಗೂ ನೀರಿನ ಬಾಟಲ್ಗಳನ್ನು ವಿತರಿಸಲಾಯಿತು.
ಜಯಂತ್ಯೋತ್ಸವದ ಅಂಗವಾಗಿ ಆಸ್ಪತ್ರೆಯ ಹೊರರೋಗಿಗಳು ಹಾಗೂ ಒಳರೋಗಿಗಳಿಗೆ ಹಣ್ಣು-ಹಂಪಲು ಮತ್ತು ಬಿಸ್ಕತ್ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಐಎಂಐಎಂ ಪಕ್ಷದ ಜಿಲ್ಲಾಧ್ಯಕ್ಷರು ಮಾತನಾಡಿ, ಸರ್ವಧರ್ಮ ಸಮಾನತೆ, ಸಹಬಾಳ್ವೆ ಹಾಗೂ ಸಹೋದರತೆಯ ಮನೋಭಾವದಿಂದ ಬದುಕಬೇಕು.
ಕಷ್ಟದ ಸಮಯದಲ್ಲಿ ಪರಸ್ಪರ ನೆರವಾಗುವುದು ಹಾಗೂ ದಾನ-ಧರ್ಮಗಳನ್ನು ಪಾಲಿಸುವುದು ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ನೀಡಿದ ಪ್ರಮುಖ ಸಂದೇಶವಾಗಿದೆ. ಅವರ ಸಂದೇಶವನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು, ಅವರು ತೋರಿದ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ. ಗೈಬುಸಾಬ್ ಗಲಗಲಿ, ಡಾ. ಕೃಷ್ಣ ಬಣ್ಣದ, ಎಐಎಂಐಎಂ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಯಾಸೀನ್ ಲೋದಿ, ಮೀರಾಸಾಬ್ ಜಗದಾಳ, ಅಮನ್ನ ಅಳಟಿ, ವಹೀದ್ ನಾಯ್ಕೋಡಿ, ವಸೀಮ್ ಹವಾಲ್ದಾರ್, ಮುಸ್ತಾಕ್ ಸೈಯದ್, ಮೊಹ್ಸಿನ್ ಮುಲ್ಲಾ, ತೌಫಿಕ್ ಆಲಗೂರ ಹಾಗೂ ಪೈಸಲ್ ಖಾದ್ರಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 