ಪ್ರವಾದಿ ಮಹಮ್ಮದ್ ಪೈಗಂಬರ್ ಮಾನವೀಯತೆಯ ಕನ್ನಡಿ: ಶಾಸಕ ರಾಘವೇಂದ್ರ ಹಿಟ್ನಾಳ್
Prophet Muhammad is the mirror of humanity: MLA Raghavendra Hitnal
ಕೊಪ್ಪಳ, 25: ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಮಾನವೀಯತೆಯ ಪ್ರತೀಕವಾಗಿದ್ದರು. ಅವರು ಜ್ಯೋತಿ, ದಿವ್ಯಜ್ಞಾನ ಹಾಗೂ ವಿಶ್ವಶಾಂತಿಯ ಸಂದೇಶವಾಹಕರಾಗಿದ್ದರು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು. ನಗರದ ಪ್ರಮುಖ ಜವಾಹರ್ ರಸ್ತೆಯಲ್ಲಿರುವ ಯೂಸೂಫಿಯಾ ಮಸೀದಿ ಆವರಣದಲ್ಲಿ ಬುಧವಾರ ಈದ್ ಮಿಲಾದ್ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತಾ ಸಮಾರಂಭದಲ್ಲಿ ಅವರು ಮಾತನಾಡಿದರು. ಯೂಸೂಫಿಯಾ ಮಸೀದಿ ಆಡಳಿತ ಮಂಡಳಿ ವತಿಯಿಂದ ಸನ್ಮಾನ ಸ್ವೀಕರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಜಾತಿ-ಮತ ಹಾಗೂ ವರ್ಣಭೇದದ ವಿರುದ್ಧ ಸಂದೇಶ ಸಾರಿದವರಾಗಿದ್ದರು ಎಂದರು.
“ಪ್ರತಿಯೊಬ್ಬ ಮನುಷ್ಯರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಭಾವೈಕ್ಯತೆಯಿಂದ ಬದುಕು ಕಟ್ಟಿಕೊಳ್ಳಬೇಕು. ಮಹಾನ್ ಪ್ರವಾದಿಗಳು ತೋರಿಸಿಕೊಟ್ಟ ಮಾರ್ಗದಲ್ಲಿ ನಾವು ಜೀವನ ಸಾಗಿಸಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ,” ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು. ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ್ ಹಾಟಿ, ಉಪಾಧ್ಯಕ್ಷ ಹೊನ್ನೂರು ಸಾಬ್ ಬೈರಾಪುರ, ಜೆಡಿಎಸ್ ನಾಯಕ ಸಿ.ವಿ. ಚಂದ್ರಶೇಖರ್, ಗುತ್ತಿಗೆದಾರ ಸುರೇಶ್ ಭೂಮರೆಡ್ಡಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಶಾಂತಣ್ಣ ಮುದುಗಲ್, ಶರಣಪ್ಪ ಸಜ್ಜನ್, ರಾಜಶೇಖರ್ ಅಡೂರು, ಗುಳಪ್ಪ ಹಲಗೇರಿ, ಶ್ರೀನಿವಾಸ ಗುಪ್ತ, ಯಮನೂರ್ಪ ನಾಯಕ್, ಅಜ್ಜಪ್ಪ ಗೌಡ, ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಪಾಷಾ ಕಾಟನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 