ಶಾಂತಿ, ಸೌಹಾರ್ದತೆ ಮತ್ತು ಮಾನವೀಯತೆಯ ಸಂದೇಶ ಸಾರಿದ ಪ್ರವಾದಿ ಪೈಗಂಬರ್: ಕರಡಿ ವಲಿಸಾಬ್
Prophet Paigambar: Messenger of Peace, Harmony, and Humanity – Karadi Valisab
ಲೋಕದರ್ಶನ ವರದಿ
ಕಂಪ್ಲಿ, ಆಗಸ್ಟ್ 28: ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಶಾಂತಿ, ಸೌಹಾರ್ದತೆ, ಭಾತೃತ್ವ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಮಾನವತಾವಾದಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧ, ಬಸವ, ಅಂಬೇಡ್ಕರ್ವಾದ) ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಹೇಳಿದರು.
ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಕೌಟುಂಬಿಕ-ಆರ್ಥಿಕ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ಪ್ರವಾದಿ ಪೈಗಂಬರ್ ಪ್ರತಿಪಾದಿಸಿದ್ದರು ಎಂದರು.
ಪೈಗಂಬರ್ ಅವರ ಸಿದ್ಧಾಂತ ಕೇವಲ ಆಧ್ಯಾತ್ಮಿಕ ವಿಚಾರಗಳಿಗೆ ಸೀಮಿತವಾಗಿರದೆ, ಮಸೀದಿ, ಮದರಸಾ ಹಾಗೂ ಧಾರ್ಮಿಕ ಆಚರಣೆಗಳ ಮೂಲಕ ಮಾನವ ಬದುಕಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಂದೇಶವನ್ನು ಒಳಗೊಂಡಿತ್ತು. ಅವರ ಬೋಧನೆಗಳು ಸಂಘರ್ಷರಹಿತವಾಗಿದ್ದು, ಸಹೋದರತೆ, ಮಾನವೀಯತೆ, ಏಕತೆ, ಸೌಹಾರ್ದತೆ ಮತ್ತು ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿವೆ ಎಂದು ತಿಳಿಸಿದರು.
ಕಂಪ್ಲಿ ಪಟ್ಟಣದಲ್ಲಿ ಮುಸ್ಲಿಂ ಧರ್ಮಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಈದ್ ಮಿಲಾದ್ ಪ್ರಯುಕ್ತ ಮಕ್ಕಳು ಹಾಗೂ ಮದೀನಾ ಸ್ತಬ್ಧಚಿತ್ರಗಳ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಮೆರವಣಿಗೆ ಶಾಂತಿಯುತವಾಗಿ ನಡೆಯಲು ಸರ್ವ ಸಮಾಜದವರ ಸಹಕಾರ ದೊರೆಯಿತು ಎಂದು ಅವರು ಹೇಳಿದರು.
ಮೆರವಣಿಗೆ ವೇಳೆ ತೋರಣಗಲ್ಲು ಡಿವೈಎಸ್ಪಿ ಪ್ರಸಾದ್ ಗೋಖಲೆ ಹಾಗೂ ಪಿಐ ಕೆ.ಬಿ. ವಾಸುಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಿದ ಪೊಲೀಸ್ ಇಲಾಖೆ ಹಾಗೂ ಸರ್ವ ಸಮಾಜದವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಿಸುವುದಾಗಿ ಕರಡಿ ವಲಿಸಾಬ್ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 