ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿಸಿಎಂ ಡಿ.ಕೆ.ಶಿವಕುಮಾರ್
Proposal to convert residential sites into commercial sites: DCM D.K. Shivakumar
ಬೆಳಗಾವಿ ಸುವರ್ಣ ವಿಧಾನಸೌಧ ಡಿ.18: ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ, ಪರಿಷ್ಕೃತ ನಕ್ಷೆಗೆ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿದರು.ಪ್ರಸ್ತುತ, ಸದರಿ ಪ್ರಸ್ತಾವನೆಯು ಕರ್ನಾಟಕ ನಗರ ್ಘ ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯಿದೆ ಅನುಸಾರ ಬಾಗಲಕೋಟೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರೀಶೀಲನಾ ಹಂತದಲ್ಲಿದ್ದು, ನಗರಾಭಿವೃದ್ಧಿ ಪ್ರಾಧಿಕಾರ, ಬಾಗಲಕೋಟೆ ಇವರ ಅನುಮೋದನೆ ನಂತರವೇ ನಿಯಾಮನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 