ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 05 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಗೆ ಪ್ರಸ್ತಾವನೆ
Proposal to prepare a 05-year strategic plan to prevent human-wildlife conflict
ಪರಿಷತ್ತಿನಲ್ಲಿ ಡಿ.16ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿರುತ್ತದೆ.
ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ.
ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ' ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪಸ್ಪಂದನ ವಾಹನ ಹಾಗೂ ಡೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT team) ಪಾಳಿ ಆಧಾರದ ಮೇಲೆ ರಚಿಸಿ, ಈ ಕ್ಷಿಪ್ರಸ್ಪಂದನ ತಂಡಕ್ಕೆ ಸಿಬ್ಬಂದಿಗಳನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ, ವಿಶೇಷ ಹುಲಿ ಸಂರಕ್ಷಣಾ ದಳದಿಂದ (STPF) ನಿಯೋಜಿಸಲಾಗಿದೆ.
ಮಾನವ ವನ್ಯಜೀವಿ ಸಂಘರ್ಷವಿರುವ ವನ್ಯಜೀವಿ ವಲಯಗಳ ಸಂಪೂರ್ಣ ಗಡಿರೇಖೆಗಳಲ್ಲಿ ಎಲ್ಲೆಲ್ಲಿ ನೆಟ್ ವರ್ಕ್ ನ ಸಂಪರ್ಕವಿರುವುದು ಅಲ್ಲಿ ರಿಯಲ್ ಟೈಂ ಸರ್ವೆಲ್ಲನ್ಸ್ Real time Surveillance)) ಜಿಎಸ್ ಎಂ ( ಉSಒ) ಆಧಾರಿತ ಕ್ಯಾಮರಾ ವಿತ್ ಗಾರ್ಡ ಸಾಪ್ಟವೇರ್ (Camera with Garuda Software) ಅಳವಡಿಸಿ, ಈ ಮಾಹಿತಿಯನ್ನಾಧರಿಸಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣದ ನಿರ್ವಹಣೆಯನ್ನು ಮಾಡಲಾಗುತ್ತಿದೆ.
ಜೊತೆಗೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಲಭ್ಯವಿರುವ ಕ್ಯಾಮರಾ ಟ್ರಾಪ್ಸ್ ( Camera traps) ಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಕಾನಫ್ಲಿಕ್ಟ್ ಝೋನ್ (Conflict Zone) ) ನಲ್ಲಿ ಅಳವಡಿಸಿ ಪ್ರಾಣಿಗಳ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 