ಬಾಗಲಕೋಟೆ10: ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಾರಕವಾದ ಜಂತು ಹುಳುಗಳಿಂದ ಮಕ್ಕಳನ್ನು ರಕ್ಷಿಸಿಕೊಳ್ಳಲು ಜಂತು ನಿವಾರಕ ಮಾತ್ರೆ ಸೇವಿಸುವುದು ಅವಶ್ಯವೆಂದು ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹೇಳಿದರು.
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಉತ್ತಮ ಆರೋಗ್ಯ ಮತ್ತು ಬೆಳೆವಣಿಗೆಗೆ ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಜಂತು ನಿವಾರಕ ಮಾತ್ರೆಗಳನ್ನು ನೀಡಬೇಕು ಎಂದರು.
ಮಕ್ಕಳು ಸ್ವಚ್ಚತೆಗೆ ಹೆಚ್ಚು ಒತ್ತು ಕೊಡಬೇಕು. ಕಡ್ಡಾಯವಾಗಿ ಶೌಚಾಲಯ ಬಳಸಬೇಕು. ಶೌಚಾಲಯ ಹೊಂದದೇ ಇರುವವರು ತಮ್ಮ ಪಾಲಕರನ್ನು ಪ್ರೇರೆಪಿಸಬೇಕು. ನಿಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು. ಊಟ ಮಾಡುವಾಗ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಅಂದಾಗ ಮಾತ್ರ ಜಂತುಹುಳು ಉತ್ಪತ್ತಿಯಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ ಜಂತು ಹುಳು ನಿವಾರಣೆಗೆ ವರ್ಷದಲ್ಲಿ ಎರಡು ಬಾರಿ 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಜಂತು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತ್ರೆಗಳನ್ನು ತಪ್ಪದೇ ಸೇವಿಸಬೇಕು. ಮಣ್ಣಿನಲ್ಲಿ ಆಟ, ಅಸುರಕ್ಷಿತವಾದ ಆಹಾರ ಸೇವನೆ, ಅನೈರ್ಮಲ್ಯತೆ ಇತ್ಯಾದಿಗಳಿಂದ ಮಕ್ಕಳಲ್ಲಿ ಜಂತುಹುಳು ಉತ್ಪಾದನೆಯಾಗುತ್ತದೆ. ಇದರಿಂದ ಮಕ್ಕಳು ಸೇರಿವಿಸ ಆಹಾರ ಸರಿಯಾಗಿ ಪಚನವಾಗದೇ ಬೆಳವಣಿಗೆ ಕುಂಠಿತವಾಗುತ್ತದೆ ಎಂದರು.
ಶಾಲಾ ಮಕ್ಕಳು ತಮ್ಮ ಮನೆಯಲ್ಲಿರುವ ಹಾಗೂ ನೆರೆಹೊರೆಯ ಮನೆಗಳಲ್ಲಿರುವ ಮಕ್ಕಳು ಜಂತು ಹುಳು ನಿವಾರಣಾ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡುವಂತಾಗಬೇಕು. ಜಂತು ನಿವಾರಣಾ ದಿನದಂದು ಬಿಟ್ಟು ಹೋದ ಮಕ್ಕಳಿಗೆ ಫೆಬ್ರವರಿ 17 ರಂದು ಸಹ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದರು. ಶೌಚಾಲಯ ಇಲ್ಲದ ಮಕ್ಕಳ ಕುಟುಂಬಗಳ ಪಟ್ಟಿಯನ್ನು ನೀಡುವಂತೆ ಕಾಲೇಜಿನ ಉಪಪ್ರಾಚಾರ್ಯರು ನೀಡಿದರೆ ಸಂಬಂಧಿಸಿದ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಮೂಲಕ ಶೌಚಾಲಯ ಕಟ್ಟಲು ಕ್ರಮಕೈಗೊಳ್ಳುವುದಾಗಿ ಮಾನಕರ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹಾಗೂ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಮಕ್ಕಳಿಗೆ ಸ್ವತಃ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಿದರು. ಅಲ್ಲದೇ ತಾವು ಸಹ ಮಾತ್ರೆಗಳನ್ನು ತೆಗೆದುಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಎನ್.ವಾಯ್.ಕುಂದರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಮಲ್ಲಿಕಾಜರ್ುನ ದೊಡ್ಡಪ್ಪನವರ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.