ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ಮೇಯರ್ ಪಿ. ಗಾದೆಪ್ಪ

ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ಮೇಯರ್ ಪಿ. ಗಾದೆಪ್ಪ Protecting the health of civil servants is everyone's responsibility: Mayor P. Proverb

ಲೋಕದರ್ಶನ ವರದಿ

 ಬಳ್ಳಾರಿ 30: ಆರೋಗ್ಯವೇ ಬದುಕಿನ ಅಮೂಲ್ಯ ಸಂಪತ್ತು. ಪ್ರತಿಯೊಬ್ಬರೂ ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಹೇಳಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದ ಡಾ. ರಾಜ್ಕುಮಾರ್ ರಸ್ತೆಯ ಬಿಐಡಿಎ ಮೈದಾನದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ. ಸರ್ಕಾರ ಸಾರ್ವಜನಿಕರ ಆರೋಗ್ಯಕ್ಕಾಗಿ ಜಾರಿಗೊಳಿಸಿರುವ ವಿವಿಧ ಆರೋಗ್ಯ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಮರ​‍್ಕವಾಗಿ ಬಳಸಿಕೊಳ್ಳುವಂತೆ ಅವರು ಕರೆ ನೀಡಿದರು.  

ಆರೋಗ್ಯ ಜಾಗೃತಿ ಮೂಡಿಸಲು ಅಧಿಕಾರಿಗಳು ಪ್ರತಿದಿನ ಕನಿಷ್ಠ ಒಂದು ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.  

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರ ಮಾತನಾಡಿ, ನಗರ ಸ್ವಚ್ಛತೆಗಾಗಿ ದುಡಿಯುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಸರ್ಕಾರ ನೀಡುವ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸಬೇಕು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.  

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸುವಂತೆ ಮನವಿ  

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಿಎಲ್‌ಒಗಳು ವಿತರಿಸಿರುವ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಶೀಘ್ರ ಸಲ್ಲಿಸುವಂತೆ ಮನವಿ ಮಾಡಲಾಯಿತು. ಅರ್ಜಿ ಸಲ್ಲಿಕೆಯಲ್ಲಿ ತೊಂದರೆ ಇದ್ದರೆ ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯಿತಿ ಅಥವಾ ಮಹಾನಗರ ಪಾಲಿಕೆ ಕಚೇರಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಯಿತು.