ಬಡ ಕುಟುಂಬಗಳ ಹಿತ ಕಾಪಾಡುವುದು ಮೊದಲ ಆದ್ಯತೆ: ಶಾಸಕ ಪಠಾಣ
Protecting the interests of poor families is the top priority: MLA Pathan
ಶಿಗ್ಗಾವಿ 11: ಕ್ಷೇತ್ರದ ಬಡ ಹಾಗೂ ವಸತಿರಹಿತ ಕುಟುಂಬಗಳ ಹಿತ ಕಾಪಾಡುವುದು ಸರ್ಕಾರದೊಂದಿಗೆ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.
ನಗರದ ಪುರಸಭೆ ಕಾರ್ಯಾಲಯದಲ್ಲಿ ಶಿಗ್ಗಾವಿ ಪುರಸಭೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಆಯೋಜಿಸಿದ್ದ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ವಾರ್ಡ್ ನಂ. 4ರಲ್ಲಿ ರಸ್ತೆ ಮತ್ತು ಚರಂಡಿ ಸುಧಾರಣಾ ಕಾಮಗಾರಿಗಳ ಭೂಮಿಪೂಜೆ ಹಾಗೂ ವಾರ್ಡ್ ನಂ. 5ರ ಶಾಲಾ ಆವರಣದಲ್ಲಿ ಇ-ಆಸ್ತಿ ಉತಾರ ಮತ್ತು ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಶ್ರಯ ಪ್ಲಾಟ್ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಂಡಿದ್ದರೂ ಹಕ್ಕುಪತ್ರ ಮತ್ತು ಉತಾರ ಇಲ್ಲದೆ ವಂಚಿತರಾಗಿದ್ದ ಬಡ ಕುಟುಂಬಗಳಿಗೆ ಅಧಿಕೃತ ದಾಖಲೆಗಳನ್ನು ವಿತರಿಸಲಾಗುತ್ತಿದೆ.
ಎಫ್+1 ವಸತಿ ಯೋಜನೆಯಡಿ 186 ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಿ ಸಾಲ ತೀರಿಸಲಾಗಿದೆ. ಆಶ್ರಯ ಪ್ಲಾಟ್‌ನ 39 ಕುಟುಂಬಗಳ ನಿವೇಶನ ಸಮಸ್ಯೆ ಪರಿಹರಿಸಲು ಸೂಕ್ತ ಯೋಜನೆ ರೂಪಿಸಿ ಸಿಸಿ ರಸ್ತೆ ನಿರ್ಮಿಸಲಾಗುವುದು ಎಂದರು.
ತಾಲೂಕಿನಲ್ಲಿ ಇದುವರೆಗೆ ಸುಮಾರು 8 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗಿದೆ. ಮೂಲಸೌಕರ್ಯವಿಲ್ಲದೆ ಹಲವು ವರ್ಷಗಳಿಂದ ವಾಸಿಸುತ್ತಿದ್ದ 385 ಕುಟುಂಬಗಳ ಪೈಕಿ ಬಹುತೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ.
ಪ್ರದೇಶದ ಬೆಳಕಿಗಾಗಿ ಎರಡು ಹೈಮಾಸ್ಟ್ ದೀಪಗಳಿಗೆ ಮಂಜೂರಾತಿ ದೊರೆತಿದ್ದು, ?1.20 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳು ಆರಂಭವಾಗಲಿವೆ. ಶೀಘ್ರದಲ್ಲೇ ?2 ಕೋಟಿ ವೆಚ್ಚದ ಮೂಲಸೌಕರ್ಯ ಕಾಮಗಾರಿಗಳಿಗೂ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಅಬ್ದುಲ್ ಕರೀಂ ಮೊಗಲಿಯಲ್ಲಿ ಮಾತನಾಡಿ, ಕ್ಷೇತ್ರದ ಬಡವರ ಸಮಸ್ಯೆಗಳಿಗೆ ಶಾಸಕ ಯಾಸೀರ್ ಖಾನ್ ಪಠಾಣ್ ತಕ್ಷಣ ಸ್ಪಂದಿಸುತ್ತಿದ್ದಾರೆ. ಅವರ ಪ್ರಯತ್ನದಿಂದ ವಾರ್ಡ್‌ನಲ್ಲಿ ಸುಮಾರು 400 ಜನರಿಗೆ ಆಶ್ರಯ ದೊರೆತಿದ್ದು, 200 ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇ-ಆಸ್ತಿ ಉತಾರ ವಿತರಿಸಲಾಗಿದೆ ಎಂದರು.
ಇದೇ ವೇಳೆ ಸಿಖ್ ಸಮುದಾಯದವರು ತಮ್ಮ ಗುರುಗಳ ಆರಾಧನೆಗಾಗಿ ಆಶ್ರಯ ಪ್ಲಾಟ್‌ನಲ್ಲಿ ಸಣ್ಣ ಪ್ರಮಾಣದ ದೇವಾಲಯ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದರು. ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ ಸೇರಿದಂತೆ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 