ಓಝೇನ್ ಪದರ ರಕ್ಷಣೆ ನಮ್ಮೆಲ್ಲರ ಹೊಣೆ
Protecting the ozone layer is the responsibility of us all
ಲೋಕದರ್ಶನ ವರದಿ
ಹುಲಕೋಟಿ, ಸೆ.20: ಮರಗಿಡಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದು ಹವಾಮಾನ ವೈಪರೀತ್ಯ ಹಾಗೂ ಓಝೇನ್ ಪದರದ ಸವಕಳಿಗೆ ಪ್ರಮುಖ ಕಾರಣವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು, ಅದನ್ನು ಮಗುವಿನಂತೆ ಪೋಷಿಸುವ ಜವಾಬ್ದಾರಿ ಹೊರಬೇಕು ಎಂದು ಗಣಿತಶಾಸ್ತ್ರ ಪ್ರಾಧ್ಯಾಪಕ ಬಸವರಾಜ ಬಳಗಾನೂರಮಠ ಹೇಳಿದರು.
ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ವಿಶ್ವ ಓಝೇನ್ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಹಾಗೂ ಶುದ್ಧ ಗಾಳಿ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಾಲೇಜಿಗೆ ಸಸಿಗಳನ್ನು ದಾನವಾಗಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಎನ್. ಹಂಜೆ ಮಾತನಾಡಿ, ಓಝೇನ್ ಪದರವು ಭೂಮಿಯ ಮೇಲಿನ ಜೀವಸಂಕುಲವನ್ನು ಸೂರ್ಯನ ಹಾನಿಕಾರಕ ನೇರಳಾತೀತ ಕಿರಣಗಳಿಂದ ರಕ್ಷಿಸುವ ಪ್ರಕೃತಿಯ ರಕ್ಷಣಾ ಕವಚವಾಗಿದೆ. ಮಾನವನ ಅವಿವೇಕದ ಚಟುವಟಿಕೆಗಳಿಂದ ಓಝೇನ್ ಪದರಕ್ಕೆ ಉಂಟಾಗುತ್ತಿರುವ ಹಾನಿ ಆತಂಕಕಾರಿ ಎಂದು ಹೇಳಿದರು.
ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ವಿಜಯಕುಮಾರ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಓಝೇನ್ ದಿನಾಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ವಿವರಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕರು ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಟ್ಟು, ಅವುಗಳ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 