30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ
ಉಡುಪಿ, ಮೇ 06,ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಸ್ಥಳೀಯ ವ್ಯಕ್ತಿಯೊಬ್ಬರು ಬಾವಿಗೆ ಇಳಿದು ಜಿಂಕೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ನಂತರ ಅದನ್ನು ಹೊರತೆಗೆಯಲಾಯಿತು. ಸಂಪೂರ್ಣ ರಕ್ಷಣಾ ಕಾರ್ಯಾಚರಣೆ ಸುಮಾರು 20 ನಿಮಿಷಗಳ ಕಾಲ ನಡೆಯಿತು ಎಂದು ವಲಯಾರಣ್ಯಾಧಿಕಾರಿ (ಆರ್‌ಎಫ್‌ಒ) ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ. “ಮೂರು ವರ್ಷದ ಗಂಡು ಜಿಂಕೆಗೆ ಯಾವುದೇ ಗಾಯಗಳಾಗಿಲ್ಲ. ಹೊರತೆಗೆದ ನಂತರ, ಅದರ ಮೇಲೆ ನೀರನ್ನು ಸಿಂಪಡಿಸಲಾಯಿತು. ಜಿಂಕೆ ಕೂಡಲೇ ಎದ್ದು ಹತ್ತಿರದ ಕಾಡಿಗೆ ಓಡಿಹೋಯಿತು, ”ಎಂದು ಅವರು ಹೇಳಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 