ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ
Protest against NEET UG question paper leak.
ಲೋಕದರ್ಶನ ವರದಿ
ಧಾರವಾಡ. 13: ಇಂದು ಂಋಖಓ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಹಾಗೂ ಸೋರಿಕೆಗೆ ಕಾರಣವಾಗಿರುವವರಿಗೆ ನಿದರ್ಶನಿಯ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎ??? ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಮಾತನಾಡಿ ಪದೇ ಪದೇ ಮರುಕಳಿಸುತ್ತಿರುವ ನೀಟ್ (ಓಇಇಖಿ-ಗಉ) ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ, ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಓಖಿಂ) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದನ್ನು ಖಂಡಿಸಿದರು.
ಮುಂದುವರೆದು ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ಬಲಿ ನೀಡಲಾಗುತ್ತಿದೆ. ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆಯನ್ನಾಗಿ ಮಾಡಿಕೊಂಡಿರುವವರಿಂದ ಇಂತಹ ಸಮಸ್ಯೆಗಳು ಪದೇ ಪದೇ ಹಲವು ಕೇಂದ್ರೀಕೃತ ಪರೀಕ್ಷೆಗಳಲ್ಲಿ ಮರುಕಳಿಸುತ್ತಿವೆ.ಈ ಅನ್ಯಾಯದಟ ವಿರುದ್ಧ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಹೋರಾಡಲು ಮುಂಬರುವುದಾಗಿ ಕರೆ ನೀಡಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯಕರ್ತರಾದ ಸಿದ್ದಲಿಂಗ ಚಿಪ್ಪಲಕಟ್ಟಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 