ನಿಡೊನೆಷನ್ ಹಾವಳಿ ವಿರೋಧಿಸಿ, ಡೆರಾ ಕಮಿಟಿ ಸಭೆ ಕರೆಯುವಂತೆ ಒತ್ತಾಯಿಸಿ
Protest against Nidonation scam, demand Dera committee to convene meeting
ಹಾವೇರಿ 15 : ಡೊನೆಷನ್ ಹಾವಳಿ ವಿರೋಧಿಸಿ, ಶುಲ್ಕ ನಿಯಂತ್ರಣ ಕಾಯ್ದೆ ಸಮರ್ಕ ಜಾರಿಗಾಗಿ ಡೆರಾ ಕಮಿಟಿ ಸಭೆಯನ್ನು ಕರೆಯಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರಿ್ಟ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಿರುತ್ತಾರೆ.ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರಿ್ಟ.ಇ ಕಾಯ್ದೆ ಜಾರಿಯಾದರೂ ಸಮರ್ಕವಾಗಿ ಪಾಲನೆಯಾಗುತ್ತಿಲ್ಲ.
ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗೂ ಆಕ್ರಮವಾಗಿ ಟ್ಯೂಷನ್, ಟ್ಯೂಟರಿಯಲ್ಸ್, ಆನದೀಕೃತವಾಗಿ ಅಖಅ ಅಃಖಅ ಕೆಲವು ಪ್ರತಿಷ್ಟಿತ ಪಿ.ಯು.ಸಿ ಕಾಲೇಜುಗಳು ಎಇಇ, ಓಇಇಖಿ, ಅಇಖಿ ಹೆಸರಿನಲ್ಲಿ ಶಾಲಾ ಕಾಲೇಜುಗಳು ನಡೆಯುತ್ತಿವೆ.ಸರಕಾರ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಶುಲ್ಕ (ಡೆವಲಪ್ ಮೆಂಟ್ ಫೀ) ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ, ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ ಎಂದರು. ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 