ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ
Protest against land encroachment
ಬೆಳಗಾವಿ 12: ನಗರದ ಆಟೋನಗರದ ಸರ್ಕಾರಿ ಜಾಗೆ ಅತಿಕ್ರಮಣ ಖಂಡಿಸಿ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ವಸತಿ ಶಾಲೆ ಮುಂಭಾಗದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಮಹಾನಗರ ಪಾಲಿಕೆಯ ಉಪಮಹಾಪೌರ ಹಣಮಂತ ಕೊಂಗಾಲಿ, ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ,ಸುರೇಶ ಯಾದವ, ಮುರಗೇಂದ್ರಗೌಡ ಪಾಟೀಲ ಅವರ ನೇತ್ರದಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳವಾರ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಮುಂಭಾಗದಲ್ಲಿರುವ ಸರ್ಕಾರಿ ಜಾಗೆಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿದ ರಾಮತೀರ್ಥ ನಗರದ ನಿವಾಸಿಗಳು, ಹಾಗೂ ವಿವಿಧ ಸಂಘಟನೆಗಳು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಅತಿಕ್ರಮಣ ಮಾಡಿಕೊಂಡಿರುವ ಜಾಗೆಯಲ್ಲಿ ನಿರ್ಮಿಸಲಾಗಿದೆ ಕಡ್ಡೆಗೊಡೆಯನ್ನು ಜೆಸಿಬಿ ಮೂಲಕ ತೆರವುಗೊಳಿಸಿದರು.
ಸ್ಥಳೀಯರ ಆರೋಪದ ಪ್ರಕಾರ, ಹಾಸ್ಟೆಲ್ ಮುಂಭಾಗದಲ್ಲಿ ಕೇವಲ 09 ಅಡಿಯಷ್ಟು ಜಾಗೆ ಮಾತ್ರ ಇಲಾಖೆಗೆ ಸೇರಿದ್ದು, ಅದರಾಚೆಗೆ ರಸ್ತೆವರೆಗೂ ಜಾಗೆಯನ್ನು ಅತಿಕ್ರಮಣ ಮಾಡಿ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದೆ. ಬುಡಾ ಇಲಾಖೆಗೆ ಸೇರಿದ ಜಾಗೆಯನ್ನು ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು.
ಅತಿಕ್ರಮಣ ನಡೆದಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು. ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಬುಡಾ ಅಧಿಕಾರಿಗಳನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡು, ಸರ್ಕಾರಿ ಜಾಗೆ ಉಳಿಸುವಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನವನ್ನು ಹೋರ ಹಾಕಿದರು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಬಿಜೆಪಿ ಮುಖಂಡರು, ವಿವಿಧ ಸಂಘಟನೆಯಗಳ ಕಾರ್ಯಕರ್ತರು, ಹಾಗೂ ಆಟೋ ನಗರ ರಹವಾಸಿಗಳು ಸೇರಿದಂತೆ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 