ಬೆಂಗಳೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
Protest against rape of Bengaluru student
ಬೆಳಗಾವಿ 16: ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಬುಧವಾರ ಇಲ್ಲಿನ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡನೀಯ. ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು. ಮತ್ತು ವಿದ್ಯಾರ್ಥಿನಿ ಮೆಲೆ ಅತ್ಯಾಚಾರವೆಸಗಿ ಬ್ಲಾಕ್‌ಮೇಲ್ ಮಾಡಿ ಬೆದರಿಕೆ ಹಾಕಿದ ಇಬ್ಬರೂ ಉಪನ್ಯಾಸಕರು ಮತ್ತೋರ್ವ ಅವರ ಸ್ನೇಹಿತ ಮೂವರಿಗೂ ಕಠಿಣ ಶಿಕ್ಷೆಯನ್ನು ನೀಡಿ ಮತ್ತೇ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಎಐಡಿಎಸ್‌ಓನ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 