ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ
Protest against rape of student in Bengaluru
ಧಾರವಾಡ 16: ಬೆಂಗಳೂರಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರ ಹೇಯ ಕೃತ್ಯವನ್ನು ಖಂಡಿಸಿ ಇಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ಂಋಖಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಅವರು ಮಾತನಾಡಿ, ಬೆಂಗಳೂರಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಶಿಕ್ಷಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಗ್ರಹಿಸಿದರು.
ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ ದಿನೇ ದಿನೇ ಹೆಚ್ಚುತ್ತಿದೆ, ಒರಿಸ್ಸಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತು, ಒಬ್ಬ ವಿದ್ಯಾರ್ಥಿನಿ ಬೆಂಕಿ ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದರೆ, ಇಂತಹ ಪ್ರಕರಣಗಳು ಹೆಚ್ಚಾಗುತ್ತವೆ,
ಈ ಘೋರ ಘಟನೆಯು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕವಾಗಿರುವ ಲೈಂಗಿಕ ದೌರ್ಜನ್ಯ ಸಮಸ್ಯೆಗಳಿಗೆ ಹಿಡಿದ ಕನ್ನಡಿಯಾಗಿದೆ. ಯುವ ಮನಸ್ಸುಗಳನ್ನು ಸ್ವಚ್ಛದ ಗೊಳಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕಾದ ಪ್ರಾಧ್ಯಾಪಕರು ಇಂತಹ ಹೇಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯ ಬಗ್ಗೆ ತ್ವರಿತ, ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸಿ, ಎಲ್ಲಾ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತರಬೇಕು.ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು.ಇದರಲ್ಲಿ ಪ್ರಬಲ ಕುಂದುಕೊರತೆ ನಿವಾರಣಾ ಕಾರ್ಯಸಮಿತಿ ಸ್ಥಾಪಿಸುವುದು ಸೇರಿದಂತೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು.ಸಂತ್ರಸ್ತೆಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಕೂಡ ವಿದ್ಯಾರ್ಥಿ ಯುವಜನರಲ್ಲಿ ಉನ್ನತ ಆದರ್ಶ ಮೌಲ್ಯಗಳನ್ನು ಬಿತ್ತುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಸಂಘಟಿಸಬೇಕೆಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಸಿಂಧು ಕೌದಿ, ಜಿಲ್ಲಾ ಉಪಾಧ್ಯಕ್ಷರಾದ ಚಂದ್ರು, ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 