ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ: ಬಿಜೆಪಿ ನಾಯಕರು ವಶಕ್ಕೆ
Protest against state government: BJP leaders detained
ಬೆಳಗಾವಿ: ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ಮಂಗಳವಾರ (ಡಿ.09) ನಡೆದಿದೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ, ಪಿ ರಾಜೀವ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ನಡಹಳ್ಳಿ ಸೇರಿದಂತೆ ಹಲವಾರು ನಾಯಕರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಹೊರವಲಯದ ಮಾಲಿನಿ ಸಿಟಿ ಪ್ರದೇಶದಲ್ಲಿ ನಡೆದ ಪ್ರತಿಭಟನಾ ಸಮಾವೇಶದ ನಂತರ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪಾದಯಾತ್ರೆ ಮೂಲಕ ಹೊರಟಿದ್ದ ನಾಯಕರನ್ನು ಅಲಾರವಾಡಾ ಕ್ರಾಸ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ನಾಯಕರು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಿಮ್ಮ ಕುರ್ಚಿ ನಾಟಕ ನೋಡಲು ನಾವು ಬೆಳಗಾವಿಗೆ ಬಂದಿಲ್ಲ. ಉತ್ತರ ಕರ್ನಾಟಕ ಜನರ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಕೊಡಿ ಎಂದು ಕೇಳುತ್ತಿದ್ದೇವೆ. ಈ ಸರಕಾರ ರೈತರ ಪಾಲಿಗೆ ಸತ್ತಿದೆ. ಕಳೆದ ಎರಡೂವರೆ ವರ್ಷದಲ್ಲಿ 2500 ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡೂವರೆ ವರ್ಷದ ಸಾಧನೆ ಎಂದು ಬಿಜೆಪಿ ನಾಯಕರು ಟೀಕಾಪ್ರಹಾರ ಮಾಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 