ಬೆಳಗಾವಿ : ಪೌರತ್ವ ತಿದ್ದುಪಡಿ ಮಸೂದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಕಾಯ್ದೆಯನ್ನು ಕೇಂದ್ರ ಸಕರ್ಾರ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲಹೊತ್ತು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯೊಂದನ್ನು ಸಲ್ಲಿಸಿದರು. ಒಂದು ಜಾತಿ, ಧರ್ಮವನ್ನು ಹೊರಗಿಟ್ಟು ಕಾನೂನು ರೂಪಿಸಿರುವ ಕೇಂದ್ರ ನಡೆ ದೇಶಕ್ಕೆ ಆತಂಕ ವಿಷಯ, ಪೌರತ್ವ ಕಾಯ್ದೆ ವಿರೋಧಿಸಿ ಕನರ್ಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಮನವಿ ರವಾನಿಸಲಾಯಿತು.
ದೇಶದಲ್ಲಿ ಆಥರ್ಿಕ ಹಿಂಜರಿಕೆಯಿಂದ ಮತ್ತಷ್ಟು ಸಮಸ್ಯೆಯಾಗುತ್ತಿದೆ ಇದಕ್ಕೆ ಕೇಂದ್ರ ಸರಕಾರ ಹೊಣೆಯಾಗಿದೆ ಇದರಿಂದ ದೇಶ ಹಿನ್ನಡೆ ಸಾಧಿಸುತ್ತಿದೆ. ದೇಶದಲ್ಲಿ ಎಲ್ಲ ಧರ್ಮದವರಿಗೂ ಜೀವಿಸುವ ಅವಕಾಶವನ್ನು ಡಾ. ಬಿ.ಆರ್. ಅಂಬೇಡ್ಕರ ಸಂವಿಧಾನದಲ್ಲಿ ನೀಡಿದ್ದಾರೆ. ಆದರೆ ಕೇಂದ್ರ ಸಕರ್ಾರ ಸರ್ವ ಧರ್ಮವನ್ನು ಗಮನದಲ್ಲಿ ಇಟ್ಟುಕೊಂಡು ಯೋಜನೆಗಳನ್ನು ರೂಪಿಸಿಬೇಕು. ಆದರೆ ಒಂದು ಧರ್ಮವನ್ನು ಹೊರಗಿಟ್ಟು ಪೌರತ್ವ ಕಾಯ್ದೆ ಜಾರಿಗೆ ತಂದಿರುವುದು ಸರಿಯಾದ ಕ್ರಮವಲ್ಲ ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ. ಇದರಿಂದ ಕೆವಲ ಮುಸ್ಲಿಂ ಸಮುದಾಯಕ್ಕೆ ಅಲ್ಲದೆ ಇತರರಿಗೂ ದುಷ್ಟರಿಣಾಮವಾಗಿದೆ. ಶೇ.80% ರಷ್ಟು ದಲಿತ ಸಮುದಾಯದವರಿಗೆ ದಾಖಲೆಗಳಿಲ್ಲ. ಪೌರತ್ವ ಕಾಯ್ದೆಯ ಬಗ್ಗೆ ತಜ್ಞರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಆದ ಕಾರಣ ತಕ್ಷಣ ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯ್ದೆಯನ್ನು ವಾಪಾಸ್ ಪಡೆಯುವಂತೆ ಮನವಿ ಮೂಲಕ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಅಮೀನಸಾಬ ಜಾತಗಾರ, ಸುಂದ್ರವ್ವಾ ಕಟ್ಟಿಮನಿ, ಸಯಿದಾ ಸನದಿ, ಫಾತಿಮಾ ಶೇಖ, ಶಶಿ ಸಾಳಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.