ನಾಲ್ಕು ಲೇಬರ್ ಕೋಡ್ ಗಳನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Protest against the four labor codes and demand fulfillment of other demands
ಕೊಪ್ಪಳ 11 : ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಎಐಡಿವೈಒ ಬೆಂಬಲಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕರಾಳ ನಾಲ್ಕು ಲೇಬರ್ ಕೋಡ್ ಗಳನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಫೆಬ್ರವರಿ 12ರಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಆಲ್ ಇಂಡಿಯಾ ಡೆಮೋಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಕರ್ನಾಟಕ ರಾಜ್ಯ ಸಮಿತಿಯು ತನ್ನ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಗುತ್ತಿಗೆ, ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕೆಂದು ಹಾಗೂ ಯುವಜನರ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಎಐಡಿವೈಒ ಈ ಮುಷ್ಕರವನ್ನು ಬೆಂಬಲಿಸಿ ಭಾಗವಹಿಸುತ್ತಿದೆ.
ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಕೇಂದ್ರ ಸರ್ಕಾರ ಹೊಸ ಉದ್ಯೋಗದ ಸೃಷ್ಟಿಯ ಮಾತಿರಲಿ ತನ್ನ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿಕೊಳ್ಳುತ್ತಿಲ್ಲ. ನಡೆಯುತ್ತಿರುವ ಅಲ್ಪಸ್ವಲ್ಪ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ವ್ಯಾಪಾಕವಾಗಿದೆ. ಇನ್ನೊಂದೆಡೆ ಗ್ರಾಮೀಣ ಭಾಗದ ಯುವಜನರಿಗೆ ಆಸರೆಯಾಗಿದ್ದ ನರೇಗಾ ಯೋಜನೆಯನ್ನು ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಸಂಪೂರ್ಣವಾಗಿ ದುರ್ಬಲಗೊಳಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರ ಬದುಕಿಗೆ ಕೊಡಲಿ ಏಟು ಕೊಟ್ಟಿದೆ. ಹಾಗೆ ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಹವ್ಯಾಹತವಾಗಿ ನಡೆದಿದೆ. ಉದ್ಯೋಗ ಸಿಗದೇ ದೊಡ್ಡ ಸಂಖ್ಯೆಯ ಯುವ ಜನರು ಆತ್ಮಹತ್ಯೆಯ ದಾರಿ ಹಿಡಿದಿರುವುದು ಅತ್ಯಂತ ಖೇದಕರವಷ್ಟೇ ಅಲ್ಲದೆ ವ್ಯವಸ್ಥೆಯ ವಿಫಲತೆಯ ಸೂಚಕವಾಗಿದೆ.ಆದ್ದರಿಂದ ಫೆಬ್ರವರಿ 12ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಕಾರ್ಮಿಕರು, ರೈತರು, ಕೃಷಿ ಕಾರ್ಮಿಕರೊಂ ದಿಗೆ ಯುವಜನರು ಕೂಡ ತಮ್ಮ ಹಕ್ಕುಗಳ ಈಡೇರಿಕೆಗಾಗಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಎಐಡಿವೈಒ ಕೊಪ್ಪಳ ಜಿಲ್ಲಾ ರ ಸಮಿತಿ ಕರೆ ನೀಡುತ್ತದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 