ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ
Protest against the release of Cauvery water
ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ನಿತ್ಯಾನಂದ ಕುಂದಾಪುರ
ರಾಣೆಬೆನ್ನೂರು, ಆ.1: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ. ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಹೇಳಿದರು.
ನಗರದಲ್ಲಿ ಶುಕ್ರವಾರ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಅಘಒಂ) ಆದೇಶವನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.
ಕಾವೇರಿ ನೀರಿನ ವಿಚಾರ ಹಲವು ವರ್ಷಗಳಿಂದ ವಿವಾದಾತ್ಮಕವಾಗಿದ್ದು, ರಾಜ್ಯ ಸರ್ಕಾರವು ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೂ ಮಣಿದು ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಒಂದು ವೇಳೆ ನೀರು ಬಿಡುಗಡೆ ಮಾಡಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುವ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಿ, ಪ್ರಸ್ತುತ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಸಮರ್ಕವಾಗಿ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗ್ರೇಡ್-2 ತಹಶೀಲ್ದಾರ್ ಅರುಣ್ ಕಾರಗಿ ಮನವಿ ಸ್ವೀಕರಿಸಿ, ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ವಿ.ಎಸ್. ಹಿರೇಮಠ, ತಾಲೂಕು ಅಧ್ಯಕ್ಷ ಚಂದ್ರ್ಪ ಬಣಕಾರ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಜಾಧವ ಸೇರಿದಂತೆ ಹಲವಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 