ಕಬ್ಬಿನ ಬೆಲೆ ನಿಗದಿಗೆ ನಾಳೆ ಹಾರುಗೇರಿ ಕ್ರಾಸ್‌ನಲ್ಲಿ ಹೋರಾಟ
Protest at Harugeri Cross tomorrow over sugarcane price fixing
ಕಬ್ಬಿನ ಬೆಲೆ ನಿಗದಿಗೆ ನಾಳೆ ಹಾರುಗೇರಿ ಕ್ರಾಸ್‌ನಲ್ಲಿ ಹೋರಾಟ
ಬೆಳಗಾವಿ 08: ಸರ್ಕಾರದ ಆದೇಶದ ಪ್ರಕಾರ ನ. 1ರ ನಂತರ ಜಿಲ್ಲೆಯ ಎಲ್ಲಾ ಕಾರ್ಖಾನೆಗಳು ಪ್ರಾರಂಭಿಸಬೇಕು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಇಲ್ಲಿಯವರೆಗೂ ಯಾವುದೇ ಕಾರ್ಖಾನೆಗಳು ಟನ್ ಕಬ್ಬಿಗೆ ಬೆಲೆಯನ್ನು ನಿಗದಿ ಮಾಡಿಲ್ಲ ಹಾಗೂ ಘೋಷಣೆಯನ್ನೂ ಮಾಡಿಲ್ಲ. ಆದ್ದರಿಂದ ಇದೇ ಕಾರಣಕ್ಕಾಗಿ ಅಕ್ಟೋಬರ 10ರಂದು ರಾಯಬಾಗ ತಾಲೂಕಿನ ಹಾರುಗೇರಿ ಕ್ರಾಸ್‌ನಲ್ಲಿ ಹೋರಾಟವನ್ನು ಹಮ್ಮಿಕೊಂಡಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆ. ಕಬ್ಬಿನ ಬೆಲೆ ನಿಗದಿಯಾಗುವವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪಾ ಪೂಜೇರಿ, ಹಾಗೂ ರಾಷ್ಟ್ರೀಯ ನಾಯಕ ಪ್ರಕಾಶ ನಾಯಕ ಅವರು ತಿಳಿಸಿದರು.
ಬೆಳಗಾವಿ ಚೆನ್ನಮ್ಮ ಸರ್ಕಲ್ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಟನ್ ಕಬ್ಬಿಗೆ 5500( ಕಾರ್ಖಾನೆ-3500 ಸರ್ಕಾರದ ತೆರಿಗೆಯಿಂದ 2000ರೂ.) ಕೊಡಬೇಕು ಎಂದು ಒತ್ತಾಯಿಸಿದರು.
ಸರ್ಕಾರದ ಆದೇಶದನ್ವಯ ಕಿತ್ತೂರು ಉತ್ಸವದ ತಯಾರಿಯನ್ನು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಹಾಗೂ ರೈತ ವಿರೋಧಿ ಜನಪ್ರತಿನಿಧಿಗಳು ಪ್ರಾರಂಭಿಸಿದ್ದಾರೆ. ಆದರೆ ಅದೇ ತಾಲೂಕಿನ ಕುಳ್ಳೋಳ್ಳಿ ಗ್ರಾಮದ ಸಾವಿರಾರು ರೈತರಿಗೆ ಜಿಲ್ಲಾಡಳಿತ, ತಾಲೂಕಾಡಳಿತ ಹಾಗೂ ಶಾಸಕರು ಸೇರಿ ಸಾವಿರಾರು ರೈತ ಕುಟುಂಬಗಳಿಗೆ ಮೋಸ ಮಾಡಿ ಸಾವಿರಾರು ಎಕರೆ ಭೂಮಿಯನ್ನು ದೇಶದ್ರೋಹಿ, ರೈತದ್ರೋಹಿ, ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನಂತೆ ದೇಶ ಪ್ರೇಮಿ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟ ಕುಟುಂಬಕ್ಕೆ ಮಾಡಿ ಕೊಟ್ಟಿರುವುದು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ಅಕ್ರಮ. ಹೀಗಾಗಿ ಈ ರೀತಿಯ ದೇಶಪ್ರೇಮಿಗಳ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಯಾವುದೇ ರೀತಿಯಲ್ಲಿ ಭಾಗವಹಿಸಲು ನೈತಕತೆ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಅರ್ಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಚೂನಪ್ಪಾ ಪೂಜೇರಿ, ರಾಷ್ಟ್ರೀಯ ನಾಯಕ ಪ್ರಕಾಶ ನಾಯಕ ಮತ್ತು ರಾಜ್ಯ ಕಾರ್ಯದರ್ಶಿ ಕಿಶನ ನಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 