ವಿವಿಧ ಬೇಡಿಕೆ ಈಡೇರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ  Protest by Anganwadi workers for fulfillment of various demands

ಬೆಳಗಾವಿ 09: ಕಾರ್ಮಿಕರಿಗೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಕಾಯ್ದೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಪ್ರತಿಭಟಿಸಿ, ರಾಜ್ಯ ಸರಕಾರಕ್ಕೆ ಮನವಿಯೊಂದನ್ನು ಸಲ್ಲಿಸಲಾಯಿತು.  

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆಯ ನಿಯಮಗಳಂತೆ ಕಾರ್ಮಿಕ ಹಕ್ಕುಗಳನ್ನು ರಕ್ಷಿಸಿ ಸಾಮಾಜಿಕ ಭದ್ರತೆ ಒದಗಿಸಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ಅಂಗನವಾಡಿ ಉದ್ಯೋಗಿಗಳ ಗೌರವ ಸೇವೆಯನ್ನು ನಾಗರಿಕ ಸೇವೆಯನ್ನಾಗಿ ಪರಿಗಣಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯನ್ನು ಕ್ರಮವಾಗಿ ಸಿ ಮತ್ತು ಡಿ ದರ್ಜೆಯ ನೌಕರರನ್ನಾಗಿ ಕಾಯಂ ಗೊಳಿಸಬೇಕು. 2011 12ನೇ ಸಾಲಿನಲ್ಲಿ ನಿವೃತ್ತರಾದ ಅಂಗನವಾಡಿ ನೌಕರರಿಗೆ ಪಿಂಚಣಿ ಸೌಲಭ್ಯ ಅನ್ವಯವಾಗುವಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.  

ಅಂಗನವಾಡಿಗಳಲ್ಲಿ ಜಾರಿಯಲ್ಲಿರುವ ಪಿಆರ್‌ಎಸ್ ಪದ್ಧತಿ ಕೈಬಿಡಬೇಕು. ಗೌರವದನ ಪದ್ಧತಿ ಕೈಬಿಟ್ಟು ಕನಿಷ್ಠ ವೇತನ ನಿಗದಿಪಡಿಸಬೇಕು. ನಿವೃತ್ತಿ ವಯಸ್ಸು 65 ರವರೆಗೆ ಏರಿಕೆ ಮಾಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಆಹಾರ ದಾನ್ಯದ ಘಟಕ ವೆಚ್ಚ (ಯೂನಿಟ್ ಕಾಸ್ಟ್‌) ವನ್ನು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.   

ಇದೇ ವೇಳೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ವಾಯ್‌.ಬಿ ಶೀಗೆಹಳ್ಳಿ ಮಾತನಾಡಿ, ನಮ್ಮ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಮನವಿ ಮನವಿ ಮಾಡಿದ್ದೇವೆ ಇದುವರೆಗೂ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ. ಇನ್ನಾದರೂ ಸರಕಾರ ನಮ್ಮ ಬೇಡಿಕೆ ಈಡೇರಿಸಲು ಕ್ರಮ ವಹಿಸಬೇಕು. ಅಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರು ಆಹಾರ ತೆಗೆದುಕೊಳ್ಳಲು ಹಿಂಜರಿಕೆ ಹಾಕುತ್ತಿದ್ದಾರೆ. ಸರಕಾರ ಗುಣಮಟ್ಟದ ಆಹಾರ ವಿತರಿಸಬೇಕು ಎಂದರು.  

ಇಂದಿನ ಪ್ರತಿಭಟನೆಯಲ್ಲಿ ಮೀನಾಕ್ಷಿ ಕೂಟಗಿ, ಗೀತಾ ಭೋಷಲೆ, ಸವಿತಾ ಡಿ., ಮಂಗಲ ಪಾಟೀಲ, ಚಿನ್ನಕ್ಕ ಹುಲಿಕವಿ, ಮಲಪ್ರಭಾ ಹ್ಯಾಗಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಭಾಗವಹಿಸಿದ್ದರು.