ಸ್ಲಂ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
Protest condemning HESCOM officials' negligence in providing electricity connections to slum areas
ಗದಗ 22: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆಸ್ಕಾಂ ಕಚೇರಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯಿಂದ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ನಿರಾಕ್ಷೇಪಣಾ ಪತ್ರ ಸಲ್ಲಿಸಿದರು ಸಹ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಗದಗ ನಗರದ ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕೊಡಲೇ ಸ್ಲಂ ಜನರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ. ಆರ್.ಮಾನ್ವಿ ಮಾತನಾಡಿ ಗದಗ-ಬೆಟಗೇರಿ ನಗರದಲ್ಲಿ 48 ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ ಪ್ರಕಾರ ಅಧಿಕೈತವಾಗಿ ಘೋಷಣೆ ಆಗಿರುತ್ತದೆ.
ಘೋಷಣೆ ಆದ ಸ್ಲಂ ಪ್ರದೇಶಗಳಿಗೆ ಇಲ್ಲಿಯವರೆಗೊ ಸ್ಲಂ ಪ್ರದೇಶದ ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯಿಂದ ನೀಡಿದ ಎನ್.ಓ.ಸಿ ಅನ್ವಯ ವಿದ್ಯುತ್ ಇಲಾಖೆಯಿಂದ ಮನೆಗೆ ಮೀಟರಗಳನ್ನು ಅಳವಡಿಸಲಾಗಿದೆ. ಘೋಷಣೆ ಆಗಿರುವ ಮತ್ತು ಅಘೋಷಿತ 70ಕ್ಕೊ ಹೆಚ್ಚು ಸ್ಲಂ ಪ್ರದೇಶಗಳಿಗೆ ಯಾವುದೇ ರೀತಿಯಾದ ದಾಖಲೆಗಳು ಇರುವುದಿಲ್ಲ. ಸ್ಲಂ ಬೋರ್ಡ ಕಚೇರಿಯಿಂದ ನೀಡಲಾಗಿರುವ ನಿರಾಕ್ಷೇಪಣೆ ಪತ್ರದ ಮೂಲಕ ನಗರದ ಸಾವಿರಾರು ಮನೆಗಳಿಗೆ ಹೆಸ್ಕಾಂ ಕಚೇರಿಯಿಂದ ವಿದ್ಯುತ್ ಸಮಪರ್ಕ ಪಡೆಯಲು ಮಿಟರಗಳನ್ನು ಮಂಜೂರು ಮಾಡಿ ಕೊಳಗೇರಿಗಳಲ್ಲಿ ವಾಸವಾಗಿರುವ ನಗರವಂಚಿತ ಸಮುದಾಯಗಳ ಮನೆಗಳಿಗೆ ಬೆಳಕನ್ನು ನೀಡಲಾಗಿದೆ. ಕೊಳಗೇರಿ ಜನರಿಗೆ ವಿದ್ಯುತ್ ಸಂಪರ್ಕ ನೀಡಲು ನಿರಾಕರಿಸುತ್ತಿರುವ ಅಧಿಕಾರಿಗಳು ಸಂವಿಧಾನದ ಆಶೆಯಕ್ಕೆ ತದ್ದವಿರುಧ್ದವಾಗಿ ನಡೆದುಕೊಳ್ಳುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 