ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
Protest condemning attack on Supreme Court Chief Justice
ಲೋಕದರ್ಶನ ವರದಿ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಗಜೇಂದ್ರಗಡ 07: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಚಪ್ಪಲಿ ಎಸೆದ ಕೃತ್ಯವು ಸಂವಿಧಾನಕ್ಕೆ ಎಸಗಿದ ಅವಮಾನ ಎಂದು ನ್ಯಾಯವಾದಿ ಬಾಲು ರಾಠೋಡ ಹೇಳಿದರು.
ನಗರದ ಅಖಿಲ ಭಾರತ ವಕೀಲರ ಒಕ್ಕೂಟ, ವಿದ್ಯಾರ್ಥಿ-ಯುವಜನ, ಬೀದಿಬದಿ ವ್ಯಾಪಾರಸ್ಥರ ಹಾಗೂ ರೈತ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಬಹಿರಂಗ ನ್ಯಾಯಾಲಯದೊಳಗೆ ಚಪ್ಪಲಿ ಎಸೆದು, "ಸನಾತನ ಧರ್ಮ" ಪರ ಘೋಷಣೆಗಳನ್ನು ಕೂಗಿದ ಘಟನೆಯು ಅತ್ಯಂತ ಆಘಾತಕಾರಿ ಮತ್ತು ಖಂಡನೀಯವಾಗಿದೆ. ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ನಾಯಕರು ಇತ್ತೀಚೆಗೆ ಮಾಡಿದ ಜಾತಿವಾದಿ, ಮನುವಾದಿ ಮತ್ತು ಸಮುದಾಯ ವಿರೋಧಿ ಹೇಳಿಕೆಗಳು ಇಂತಹ ಕೃತ್ಯಗಳಿಗೆ ಧೈರ್ಯ ನೀಡಿವೆ. ಈ ಘಟನೆ, ಹಿಂದುತ್ವದ ಸಂಪ್ರದಾಯಪರ ಶಕ್ತಿಗಳು ಸಮಾಜದಲ್ಲಿ ಬಿತ್ತಿರುವ ಮನುವಾದಿ ಮತ್ತು ದ್ವೇಷಪೂರಿತ ವಿಷದ ಮತ್ತೊಂದು ಉದಾಹರಣೆಯಾಗಿದೆ. ಇದು ಸಂಘ ಪರಿವಾರದ ಅಸಹಿಷ್ಣುತೆ ಮತ್ತು ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದ ಯಾವುದೇ ಅಭಿಪ್ರಾಯವನ್ನು ಸಹಿಸಲಾರದ ಸ್ವಭಾವವನ್ನು ಕೂಡ ತೋರಿಸುತ್ತದೆ ಎಂದರು.
ಸಿಐಟಿಯು ಜಿಲ್ಲಾ ಮುಖಂಡ ಪೀರು ರಾಠೋಡ ಮಾತನಾಡಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಸರ್ಕಾರ ದೃಢವಾದ ಕ್ರಮ ಕೈಗೊಳ್ಳಬೇಕು; ಜೊತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.
ಯುವ ವಕೀಲ ದಾವಲಸಾಬ ತಾಳಿಕೋಟಿ ಮಾತನಾಡಿ ಸಂವಿಧಾನ ಎತ್ತಿಹಿಡಿಯುವಲ್ಲಿ ಶ್ರಮಿಸುತ್ತಿರುವ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಸನಾತನವಾದಿ ವಕೀಲನೊಬ್ಬನ ಮೂಲಕ ಮಾಡಿಸಲಾದ ದಾಳಿ ಅತ್ಯಂತ ಖಂಡನೀಯ. ಸಂಘ ಪರಿವಾರದ ಉದ್ರೇಕಕಾರಿ ಮಾತುಗಳೇ ಇದರ ಹಿಂದಿನ ಕರಾಳ ಕೈವಾಡಗಳು. ಹಾಗಾಗಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ಬಂಧಿಸಲ್ಪಟ್ಟಿರುವ ವಕೀಲನ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದರು.
ಈ ವೇಳೆ ಫಯಾಜ್ ತೋಟದ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ ಮೆಹಬೂಬ್ ಹವಾಲ್ದಾರ್, ಚಂದ್ರು ರಾಠೋಡ, ರೂಪೇಶ ಮಾಳೋತ್ತರ ಸೇರಿದಂತೆ ಇತರರು ಭಾಗವಹಿಸಿದ್ದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 