ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ
Protest condemning the slanderous propaganda against the name of the Dharmasthala constituency
ಸಿಂದಗಿ 31: ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಕಛೇರಿಯವರೆಗೆ ಪಾದಯಾತ್ರೆ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಸಂಸದ ರಮೇಶ ಜಿಗಜೀಣಗಿ, ಮಾಜಿ ಶಾಸಕ ರಮೇಶ ಭೂಸನೂರ, ಸುರೇಶ ಬಿರಾದಾರ, ಮಾಳುಗೌಡ ಪಾಟೀಲ, ರಮೇಶ ಮಸಬಿನಾಳ, ಮಂಡಲ ಅದ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿರುವ ಧರ್ಮಸ್ಥಳ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ಧೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ.
ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಠ ವ್ಯಕ್ತಿಗಳು ಯಾರು? ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಿಲ್ಲ.
ಆದುದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 