ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ದ್ವಂದ್ವ ಹೇಳಿಕೆ ಖಂಡಿಸಿ ಪ್ರತಿಭಟನೆ
Protest condemns Chief Minister Siddaramaiah's double-edged statement on factory expansion
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ದ್ವಂದ್ವ ಹೇಳಿಕೆ ಖಂಡಿಸಿ ಪ್ರತಿಭಟನೆ
ಕೊಪ್ಪಳ 13 : ಅಶೋಕ ವೃತ್ತದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ಕುರಿತು ನೀಡಿದ ದ್ವಂದ್ವ ಹೇಳಿಕೆಗಳನ್ನು ಖಂಡಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ನಗರದ ಅಶೋಕ ವೃತ್ತದಲ್ಲಿ ಸೆಪ್ಟೆಂಬರ್ 13 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಸೆಪ್ಟೆಂಬರ್ 12 ರಂದು ಶುಕ್ರವಾರ ರಾತ್ರಿ ನಡೆದ ಪೂರ್ವ ಭಾವಿ ಸಭೆಯ ಚರ್ಚೆಯಲ್ಲಿ ಜಪಾನ್ ದೇಶದ ಸುಮಿಟಾವೊ ಕಂಪನಿ ಜೊತೆಗೆ ಕರ್ನಾಟಕ ಸರ್ಕಾರ ಗಿಣಿಗೇರಿ - ಕನಕಾಪುರದಲ್ಲಿ ಮುಕುಂದ - ಸುಮಿ ಉಕ್ಕಿನ ಘಟಕ ಸ್ಥಾಪನೆ (ವಿಸ್ತರಣೆ) ಮಾಡಲು ಒಪ್ಪಂದ ಮಾಡಿಕೊಂಡಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇವರು ಹೇಳಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆಯನ್ನು ಜಂಟಿ ಕ್ರಿಯಾ ವೇದಿಕೆಯಿಂದ ನಡೆಸಲು ನಿರ್ಧರಿಸಲಾಗಿದೆ. ಕಾರ್ಖಾನೆಗಳ ವಿಸ್ತರಣೆಯಿಂದ ಉಂಟಾಗುವ ಮಾಲಿನ್ಯ ಜೀವರಾಶಿಗಳ ಮೇಲೆ ಆಗಲಿರುವ ದುಷ್ಪರಿಣಾಮಗಳಿಂದ ರಕ್ಷಣೆಗಾಗಿ ಪ್ರತಿಯೊಬ್ಬ ಒಡನಾಡಿ ಹೋರಾಟಗಾರರು, ಪ್ರಗತಿಪರ,ಪರಿಸರ,ಜೀವಪರ ಕಾಳಜಿ ಉಳ್ಳವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಲಾಗಿದೆ. ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಪ್ರಧಾನ ಸಂಚಾಲಕರಾದ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ವಹಿಸಿದ್ದರು. ಮುಖಂಡರಾದ ಬಸವರಾಜ್ ಶೀಲವಂತರ್. ಮಹಾಂತೇಶ ಕೋತಬಾಳ, ಡಿ.ಹೆಚ್. ಪೂಜಾರ. ಎಸ್.ಎ.ಗಫಾರ್, ಚನ್ನಬಸಪ್ಪ ಅಪ್ಪಣವರ್, ಕೆ.ಬಿ. ಗೋನಾಳ, ಮುದುಕಪ್ಪ ಹೊಸಮನಿ, ಮಂಜುನಾಥ ಗೊಂಡಬಾಳ,ರವಿ ಕಾಂತನವರ್,ಹಂಚಾಳಪ್ಪ ಇಟಗಿ ಮುಂತಾದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 