ಧಾರವಾಡ 18: ಸರ್ಕಾ ರಿ ಪದವಿ ಕಾಲೇಜುಗಳಲ್ಲಿ 2019-2020ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಆದರೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೀಡದಿರುವುದು ಒಂದು ರೀತಿಯ ತಾರತಮ್ಯ ಮಾಡಿದಂತೆ ಆಗುತ್ತದೆ. ಮುಖ್ಯವಾಗಿ ದ್ವಿತಿಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಜೆಕ್ಟ್ ವರ್ಕಗಳಿಗೆ ಲ್ಯಾಪ್ಟಾಪ್ನ ಅವಶ್ಯಕತೆ ಇರುತ್ತದೆ. ಅದಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ 2-3 ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್ಟಾಪ್ ನೀಡುವುದರಿಂದ ಅವರು ತಮ್ಮ ಉನ್ನತ ವ್ಯಾಸಾಂಗ ನಡೆಸಲು ಅನುಕೂಲವಾಗುತ್ತದೆ. ಈ ಹಿಂದೆ ಸರ್ಕಾ ರವು ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ಒದಗಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ಸರ್ಕಾ ರದ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆಯನ್ನು ಈ ಕೂಡಲೇ ದ್ವಿತಿಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೆ ವಿಸ್ತರಿಸಿ ಅವರಿಗೂ ಇದರ ಪ್ರಯೋಜನ ದೊರೆಯುವಂತೆ ಸರ್ಕಾ ರ ಕ್ರಮ ಕೈಗೊಳ್ಳಬೇಕು ಎಂದು ಎಐಡಿವೈಓ ಜಿಲ್ಲಾಧ್ಯಕ್ಷ ಭವಾನಿಶಂಕರ್ ಎಸ್.ಗೌಡ ಆಗ್ರಹಿಸಿದರು.
ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಇಂದು ಸರ್ಕಾ ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ನೀಡುವಂತೆ ಆಗ್ರಹಿಸಿ ಕಲಾಭವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಎಐಡಿಎಸ್ಓ ಜಿಲ್ಲಾಧ್ಯಕ್ಷ ಮಹಾಂತೇಶ ಬಿಳೂರು ಮಾತನಾಡಿ ಇಂದು ಸರ್ಕಾ ರಗಳು ಬಜೆಟ್ ಕೊರತೆಯ ನೆಪವೊಡ್ಡಿ ಹಂತ-ಹಂತವಾಗಿ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳನ್ನು ಕಡಿತಗೊಳಿಸುತ್ತಿದೆ. ಸರ್ಕಾ ರ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸಬೇಕಾಗುತ್ತದೆ ಎಂದು ಹೇಳಿದರು.
ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ರಣಜಿತ ದೂಪದ್, ಸೇರಿದಂತೆ ಸಂಘಟನೆಯ ಶರಣು ಬಸವ ಪಾಟೀಲ್, ಸಿಂಧೂ ಕೌದಿ, ಅರುಣ ವಿದ್ಯಾರ್ಥಿಗಳಾದ ದೇವರಾಜ, ಮಲ್ಲೇಶ, ಮೃತ್ಯುಂಜಯ ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.