ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ  Protest demanding a ministerial post for Umashree

ಲೋಕದರ್ಶನ ವರದಿ 

ರಬಕವಿ-ಬನಹಟ್ಟಿ 04 : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ, ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬನಹಟ್ಟಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆದರು.  

ತೇರದಾಳ ಮತಕ್ಷೇತ್ರದ ನೇಕಾರ ಮುಖಂಡ ಸಂಗಪ್ಪ ಕುಂದಗೋಳ ಮಾತನಾಡಿ, ಮಾಜಿ ಸಚಿವೆ ಉಮಾಶ್ರೀ ಅವರು ಪಕ್ಷದ ಸಂಘಟನೆ ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.  

ತೇರದಾಳ ಕ್ಷೇತ್ರದ ಅಭಿವೃದ್ಧಿಗೆ ಅವರ ಅನುಭವ ಮತ್ತು ನಾಯಕತ್ವ ಅಗತ್ಯವಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರದ ಜನರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.  

ಯುವ ಮುಖಂಡ ರಾಹುಲ್ ಕಲಾಲ ಮಾತನಾಡಿ, ಉಮಾಶ್ರೀ ಅವರು ಅನುಭವಿ ರಾಜಕಾರಣಿಯಾಗಿದ್ದು, ಯಾವುದೇ ಆರೋಪಗಳಿಲ್ಲದೆ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ನೇಕಾರ ಸಮುದಾಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೂಡಲೇ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.  

ಪ್ರತಿಭಟನೆಯಲ್ಲಿ ಯಮನಪ್ಪ ತಳವಾರ, ಸದಾಶಿವ ಗೊಂಡಕರ, ಸಿದ್ದಪ್ಪ ರಜಳಗಿ, ದೇವಪ್ಪ ಮಹಿಷವಾಡಗಿ, ಕಾಡು ಮೋಪಗಾರ, ಮಾಯಪ್ಪ ಕರಜ್ಯೋತಿ, ಕಲ್ಲಪ್ಪ ಅಮಜಗೋಳ, ಸುರೇಶ ಹಿಪ್ಪರಗಿ, ರಾಜೇಶ್ವರಿ ಕಾಂಬಳೆ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.