ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ: ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಚಿತ್ರ
Protest demanding action against officials: Picture of protest near the DC office
ಕಾರವಾರ 24 :ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದ ಪ್ರಕರಣದಲ್ಲಿ ಐಆರ್‌ಬಿ ಕಂಪೆನಿಯ ಅಧಿಕಾರಿಗಳ ವಿರುದ್ಧ ದೂರು ದಾಖಲಾದರೂ ಅವರ ಬಂಧನವಾಗಿಲ್ಲ ಎಂದು ಆರೋಪಿಸಿ ಈಡಿಗ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮಿ ಹಾಗೂ ಸಂತ್ರಸ್ತ ಕುಟುಂಬದವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಬಳಿ ಧರಣಿ ನಡೆಸಿದರು.
ದುರಂತದಲ್ಲಿ ಮೃತರಾದವರಿಗೆ ನ್ಯಾಯ ಸಿಗುವ ವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಮಳೆಯಲ್ಲೂ ಧರಣಿ ಮುಂದುವರೆಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದು ನ್ಯಾಯಾಲಯಕ್ಕೆ ಈಗಾಗಲೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಪ್ರತಿಭಟನಾಕಾರರ ಮನವೊಲಿಸಲು ಮುಂದಾದರರು. ರಾತ್ರಿ ಎಸ್ಪಿ ಭೇಟಿಯಾಗುವ ಭರವಸೆ ಸಿಕ್ಕ ನಂತರ ಧರಣಿ ಮುಕ್ತಾಯ ಮಾಡಲಾಯಿತು.ಶಿರೂರಿನಲ್ಲಿ ಗುಡ್ಡ ಕುಸಿದು ದುರಂತ ಸಂಭವಿಸಲು ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ವಿಸ್ತರಿಸಿದ್ದ ಐ.ಆರ್.ಬಿ ಕಂಪನಿ ಕಾರಣ. ಈ ಕಾರಣಕ್ಕಾಗಿ ಕಂಪನಿಯ ನಿರ್ದೇಶಕರ ವಿರುದ್ಧ ನ್ಯಾಯಾಂಗ ಹೋರಾಟ ನಡೆಸಿದ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈವರೆಗೆ ಪ್ರಕರಣದ ತನಿಖೆ ಪ್ರಗತಿ ಕುರಿತು ಪೊಲೀಸರು ಮಾಹಿತಿ ನೀಡಿಲ್ಲ. ದೂರುದಾರನಾದ ನನ್ನನ್ನು ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ ಎಂದು ಆರೋಪಿಸಿದರು. ಸರಿಯಾದ ವಿಚಾರಣೆಯೇ ನಡೆದಿಲ್ಲ ಎಂದರು.
ಶಿರೂರು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ನೀಡಿದೆ. ಕೇಂದ್ರ ಸರ್ಕಾರದಿಂದ ಒಂದು ಪೈಸೆಯೂ ಬಂದಿಲ್ಲ ಎಂದು ಆರೋಪಿಸಿದರು. ಸಂಜೆಯ ವೇಳೆ ಪೊಲೀಸ್ ಅಧಿಕಾರಿಗಳು ಮನವೊಲಿಸಿದ ಬಳಿಕ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾಗುದಾಗಿ ತಿಳಿಸಿ ಪ್ರತಿಭಟನೆ ಹಿಂಪಡೆದರು....
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 