ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ
Protest demanding adequate bus facilities for students
ಲಕ್ಷ್ಮೇಶ್ವರ, ಸೆ. 3: ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತಾಲ್ಲೂಕು ಘಟಕ ಹಾಗೂ ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿದಿನ ಲಕ್ಷ್ಮೇಶ್ವರದಿಂದ ಗದಗ ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ತೆರಳುತ್ತಾರೆ. ಆದರೆ, ಬೆಳಿಗ್ಗೆ ಗದಗ ಮಾರ್ಗಕ್ಕೆ ತೆರಳಲು ಸೂಕ್ತ ಸಮಯದಲ್ಲಿ ಬಸ್ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಕುರಿತು ಸಾರಿಗೆ ಘಟಕದ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿದಿನ ಸೂಕ್ತ ಬಸ್ ಸೌಲಭ್ಯಕ್ಕಾಗಿ ಸುಮಾರು ಒಂದು ಗಂಟೆ ಕಾಯಬೇಕಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಘಟಕದ ಅಧಿಕಾರಿಗಳು, ಇನ್ನು ಮುಂದೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತಾಲ್ಲೂಕು ಅಧ್ಯಕ್ಷ ಮಾಂತೇಶ ಮಲಕವಾಡ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಠಾಣೆ ಪಿಎಸ್ಐ ಟಿ.ಕೆ. ರಾಠೋಡ್ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 