ಅಪಪ್ರಚಾರ ಷಡ್ಯಂತರ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
Protest demanding an end to the propaganda conspiracy
ತಾಳಿಕೋಟಿ 18: ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಪಟ್ಟಣದ ಸರ್ವ ಸಮುದಾಯಗಳ ಸಹಯೋಗದಲ್ಲಿ ಪ್ರತಿಭಟನಾ ಮೆರವಣಿಗೆಯು ಸೋಮವಾರ ನಡೆಯಿತು.
ಪಟ್ಟಣದ ರಾಜವಾಡೆಯಿಂದ ಹೊರಟು ಬಸವೇಶ್ವರ ವೃತ್ತದವರೆಗೆ ವಿವಿಧ ಘೋಷಣೆಗಳನ್ನು ಕೂಗುತ್ತ ಸರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ ಧರ್ಮಸ್ಥಳ ಕ್ಷೇತ್ರವೂ ಹಿಂದು ಸಮುದಾಯಗಳ ಶ್ರದ್ಧಾ ಕೇಂದ್ರವಾಗಿದ್ದು ಧರ್ಮಕ್ಷೇತ್ರದ ಬಗ್ಗೆ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ನಡೆಯುತ್ತಿರುವ ಅಪಪ್ರಚಾರ,ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು. ಇದರ ಸೂಕ್ತ ತನಿಖೆಯಾಗಬೇಕು ಎಂದರು.
ಪ್ರಮುಖರಾದರ ವಿಜಯಸಿಂಗ ಹಜೇರಿ, ಸಂಗನಗೌಡ ಮ,ದರಕಲ್ಲ, ಗುಂಡುರಾವ ಧನಪಾಲ ಇತರರು ಮಾತನಾಡಿದರು. ನಂತರ ಬಸವೇಶ್ವರ ವೃತ್ತದಲ್ಲಿಯೇ ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಗ್ರೇಡ್ 2 ಪ್ರದೀಪ ದೇವಗಿರಿ ಅವರು ಪ್ರತಿಭಟನಾಕಾರರ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 